September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

ದ.ಕ ಜಿಲ್ಲಾ ಶಾಲಾ ಕಾಲೇಜುಗಳಿಗೆ 2ದಿನ ರಜೆ ಘೋಷಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆಯಿದ್ದು ಮೇ.28ರವರೆಗೆ ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿರುತ್ತದೆ.

ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆ, ಸಿಬಿಎಸ್ಸಿ, ಪದವಿ ಪೂರ್ವ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಮೇ. 27 ಮತ್ತು 28ರಂದು ರಜೆಯನ್ನು ಘೋಷಿಸಲಾಗಿರುತ್ತದೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ. ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ ಸಮುದ್ರತೀರಕ್ಕೆ ಚಾರಣಕ್ಕೆ ತೆರಳದಂತೆ ಸೂಚಿಸಲಾಗಿದೆ.

Related posts

ಸಹನಾ ಶ್ರೀ ಫೌಂಡೇಶನ್ ವತಿಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಕ್ರೀಡಾ ಸಮವಸ್ತ್ರ ವಿತರಣೆ

Suddi Udaya

ಹಿರಿಯ ಕಾಂಗ್ರೆಸ್ ಮುಖಂಡ ಲಿಂಗಪ್ಪ ಗೌಡ ನಿಧನ

Suddi Udaya

ಆರಂಬೋಡಿ ಸ್ಫೂರ್ತಿ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಮುಂಡೂರು ಮಂಗಳಗಿರಿ ದೇವಸ್ಥಾನದ ವತಿಯಿಂದ ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya
error: Content is protected !!