September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಿಇಟಿ ಫಲಿತಾಂಶ : ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ‍್ಯಾಂಕ್

ಮೂಡುಬಿದಿರೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸಿದ ಸಿಇಟಿ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆಯನ್ನು ಮಾಡಿದ್ದಾರೆ.


ಶಿಶಿರ್ ಹೆಚ್ ಶೆಟ್ಟಿ ಇ೦ಜಿನಿಯರಿ೦ಗ್ ವಿಭಾಗದಲ್ಲಿ 4 ನೇ ರ‍್ಯಾಂಕ್, ನೂತನ್ ಕೃಷ್ಣ ಬಿ ಬಿ ಎನ್ ವೈ ಎಸ್ ನಲ್ಲಿ ೪ ನೇ ರ‍್ಯಾಂಕ್, ಬಿ ಫಾರ್ಮ ಮತ್ತು ಫಾರ್ಮಾ ಡಿ ನಲ್ಲಿ ೫ ನೇ ರ‍್ಯಾಂಕ್, ಬಿ ಎಸ್ಸಿ ನರ್ಸಿ೦ಗ್ ಮತ್ತು ವೆಟರಿನರಿ ಸಾಯನ್ಸ್ ನಲ್ಲಿ ೬ ನೇ ರ‍್ಯಾಂಕ್ ನ್ನು ಗಳಿಸಿರುತ್ತಾನೆ.


ವಿವಿಧ ವಿಭಾಗಗಳಲ್ಲಿ ನಡೆದ ಸಿಇಟಿ ಪರೀಕ್ಷೆಯಲ್ಲಿ ಎಕ್ಸಲೆಂಟ್ ಸಂಸ್ಥೆಯ ವಿದ್ಯಾರ್ಥಿಗಳು ನೂರರ ಒಳಗೆ ೧೩ ರ‍್ಯಾಂಕ್, ಐದುನೂರರ ಒಳಗೆ ೩೮ ರ‍್ಯಾಂಕ್, ಸಾವಿರದ ಒಳಗೆ ೬೪ ರ‍್ಯಾಂಕ್ ಗಳನ್ನು ಪಡೆದು ರಾಜ್ಯದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ಅರ್ಹತೆ ಗಳಿಸಿದ್ದಾರೆ.


ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಎಕ್ಸಲೆಂಟ್ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ರೀತಿಯಲ್ಲಿ ತರಬೇತುಗೊಳಿಸಿ ಪ್ರತಿವರ್ಷದಂತೆ ಈ ವರ್ಷವೂ ರಾಜ್ಯಮಟ್ಟದಲ್ಲಿ ಉತ್ತಮ ಫಲಿತಾಂಶವನ್ನು ದಾಖಲಿಸಿದೆ.
ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ್ ಕುಮಾರ ಶೆಟ್ಟಿ, ಮತ್ತು ಉಪನ್ಯಾಸಕ ವೃ೦ದ ವಿದ್ಯಾರ್ಥಿಗಳನ್ನು ಅಭಿನಂದಿಸಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.

Related posts

ಮುಂಡಾಜೆ ಕೀರ್ತನಾ ಕಲಾ ತಂಡ ವತಿಯಿಂದ ಆಟಿಡೋಂಜಿ ಐತಾರೊ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಸೂರಜ್ ಬಳಂಜ ಹೆಚ್. ಪೂಜಾರಿ ಆಯ್ಕೆ

Suddi Udaya

ವಾಮಂಜೂರಿನಲ್ಲಿ ವಿಜಯ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 21ನೇ ಶಾಖೆ ಉದ್ಘಾಟನೆ

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ಹೊಸಂಗಡಿ ಶೌರ್ಯ ‌ವಿಪತ್ತು ನಿರ್ವಹಣಾ ಘಟಕದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ

Suddi Udaya
error: Content is protected !!