23.8 C
ಪುತ್ತೂರು, ಬೆಳ್ತಂಗಡಿ
May 29, 2025
ಅಪರಾಧ ಸುದ್ದಿಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ದಕ್ಷಿಣ ಕನ್ನಡ: ಬೆಳ್ತಂಗಡಿ ಸೇರಿದಂತೆ 5 ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ ಮೇ 27ರ ಸಂಜೆ 6 ಗಂಟೆಯಿಂದ ಮೇ 30ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.

ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ಮಂಗಳವಾರ (ಮೇ 27) ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ಪರಿಣಾಮ ಕೊಳತ್ತಮಜಲು ನಿವಾಸಿ ರಹೀಮ್ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಾಯಾಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಫ್ಯಾನ್ ಕೊಡುಗೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಶ್ರಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಜೂ. 3: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಉಚಿತ ಪ್ರದರ್ಶನ

Suddi Udaya

ಸಿಯೋನ್ ಆಶ್ರಮ : ಮಾನಸಿಕ ಅಸ್ವಸ್ಥತೆಯಿಂದ ಚೇತರಿಸಿಕೊಂಡು ಮನೆ ಸೇರಿದ ಸಂದೀಪ್ ಪರಹೈ

Suddi Udaya

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕರವರಿಗೆ ಆರ್ಥಿಕ ಧನಸಹಾಯ

Suddi Udaya

ಕನ್ಯಾಡಿ 32 ಮತ್ತು 33 ಬೂತ್‌ಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya
error: Content is protected !!