ಬೆಳ್ತಂಗಡಿ: ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆದದ್ದು, ಇದು ತೀರಾ ಖಂಡನೀಯ, ಪೋಲಿಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು, ಜನರಿಗೆ ರಕ್ಷಣೆ ನೀಡಬೇಕು ಜಿಲ್ಲೆಯ ಜನತೆ ಶಾಂತಿ ಕಾಪಾಡಬೇಕು, ಕೊಲ್ಲುವ ರಾಕ್ಷಸಿ ಕೃತ್ಯಕ್ಕೆ ನನ್ನ ಧಿಕ್ಕಾರವಿದೆ. ಕೋಮು ದ್ವೇಷಕ್ಕೆ ಯಾವ ಧರ್ಮದವನು ಬಲಿಯಾಗಬಾರದು. ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಲಿ, ಜಿಲ್ಲೆಯ ಶಾಂತಿ ಸೌಹಾರ್ದತೆ ಮತ್ತೆ ಮರುಕಳಿಸಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
