25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿಯಾಗಿ ಸಮಾಜ ಸೇವಕ ಕೆ. ಮೋಹನ್ ಕುಮಾರ್ ಆಯ್ಕೆ

ಬೆಳ್ತಂಗಡಿ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಸೇವಾ ಕಾರ್ಯಕ್ಕೆ ನೂತನ ಟ್ರಸ್ಟಿಯಾಗಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ, ಉದ್ಯಮಿ ಕೆ. ಮೋಹನ್ ಕುಮಾರ್ ನೇಮಕಗೊಂಡಿದ್ದಾರೆ.


ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾಗಿ, ಉದ್ಯಮಿಯಾಗಿ, ಸಮಾಜ ಸೇವಕರಾಗಿ ವಿಭಿನ್ನ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ಕೆ. ಮೋಹನ್ ಕುಮಾರ್ ಅವರು ಗುರುತಿಸಿಕೊಂಡಿದ್ದಾರೆ.


ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಂತ ಚಿಂತನೆ ಮಾಡಿ ಹಲವಾರು ಶಾಲೆಗಳಿಗೆ ಕಾಯಕಲ್ಪ ನೀಡಿದ್ದಾರೆ. ಬದುಕು ಕಟ್ಟೋಣ ಬನ್ನಿ ತಂಡದ ಮೂಲಕ ಯುವ ಸಮಾಜಕ್ಕೆ ಶಕ್ತಿಯಾಗಿ ಮತ್ತೊಬ್ಬರ ಬದುಕನ್ನು ಕಟ್ಟುವ ಕೆಲಸವನ್ನು ಮಾಡುತ್ತಿರುವುದು ಇವರ ಸಮಾಜಸೇವೆಗೆ ಹಿಡಿದ ಕೈಗನ್ನಡಿಯಾಗಿದೆ. ಹೀಗೆ ಹತ್ತು ಹಲವಾರು ಸಮಾಜಕ್ಕೆ ಪ್ರೇರಣದಾಯಿ ಕೆಲಸ ಮಾಡುತ್ತಿರುವ ಮೋಹನ್ ಕುಮಾರ್ ಪ್ರತಿಷ್ಠಿತ ಯಕ್ಷ ಧ್ರುವ ಪಟ್ಲ ಫೌಂಡೇಶನ್‌ನ ಟ್ರಸ್ಟಿಯಾಗಿದ್ದಾರೆ.


ಜೂನ್ 1 ರಂದು ನಡೆಯುವ ಪಟ್ಲ ಪೌಂಢೇಶನ್‌ನ ೧೦ನೇ ವರ್ಷದ ದಶಮಾನೋತ್ಸವ ಸಂಭ್ರಮಕ್ಕೆ ಕೆ. ಮೋಹನ್ ಕುಮಾರ್ ಅವರನ್ನು ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಸಂಚಾಲಕ ಕಿರಣ್ ಕುಮಾರ್ ಶೆಟ್ಟಿ ಜೈನ್ ಪೇಟೆ, ಸದಸ್ಯ ವೆಂಕಟರಮಣ ಶೆಟ್ಟಿ ಉಜಿರೆ ಆಮಂತ್ರಣ ನೀಡಿ ಆಹ್ವಾನಿಸಿದರು.

Related posts

ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಕಚ್ಚಾವಸ್ತು ಪೂರೈಕೆದಾರರಿಂದ ನಾಗಪುರದಲ್ಲಿ ಪ್ರತಿಭಟನೆ – ರೂ.11.50 ಕೋಟಿ ಪಾವತಿಗೆ ಕಂಪೆನಿ ಒಪ್ಪಿಗೆ

Suddi Udaya

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

Suddi Udaya

ಸಾವ್ಯ: ನೂಜಿಲೋಡಿಯಲ್ಲಿ ಮನೆಗೆ ನುಗ್ಗಿದ್ದ ಕಳ್ಳರು: ರೂ.2.15ಲಕ್ಷ ಮೌಲ್ಯದ ಸೊತ್ತುಗಳ ಕಳವು

Suddi Udaya

ಧರ್ಮಸ್ಥಳ “ರಂಗಶಿವ”ಬಳಗದಿಂದ ಮಕ್ಕಳ ರಂಗ ಶಿಬಿರ “ನಲಿಯೋಣ ಬಾ- 2023”

Suddi Udaya

ಶ್ರೀ ಕ್ಷೇ. ಧ.ಗ್ರಾ. ಯೋಜನೆ ಬೆಳ್ತಂಗಡಿ ವಲಯದ ಭಜನಾ ಮಂಡಳಿಯ ಸಭೆ

Suddi Udaya
error: Content is protected !!