September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ್ರೌಢ ಶಾಲೆಯಲ್ಲಿ1994-95 ನೇ ಸಾಲಿನ ವಿದ್ಯಾರ್ಥಿಗಳ ಸ್ನೇಹ ಕೂಟ

ಮುಂಡಾಜೆ ಪ್ರೌಢ ಶಾಲೆಯಲ್ಲಿ 1994-95 ನೇ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸ್ನೇಹ ಕೂಟ ಕಾರ್ಯಕ್ರಮವು ಇತ್ತೀಚೆಗೆ ಪ್ರೌಢ ಶಾಲೆಯಲ್ಲಿ ನಡೆಯಿತು.

ಆ ಶಾಲೆಯ ಈಗಿನ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಂತಿ ಅವರ ಮಾರ್ಗದರ್ಶನದಂತೆ ಈಗಿನ ಆಡಳಿತ ಮಂಡಳಿಯವರ ಸಹಕಾರದೊಂದಿಗೆ ಸಭಾ ಕಾರ್ಯಕ್ರಮ ನಡೆಯಿತು.

ಈ ವೇಳೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ನಿವೃತ್ತಿ ಹೊಂದಿದ ಗುರುಗಳಾದ ಶ್ರೀಮತಿ ಸಗುಣಾ ಭಟ್ ಹಾಗೂ ಬಾಬು ಗೌಡ ಅವರು ಹಿರಿಯ ವಿದ್ಯಾರ್ಥಿಗಳನ್ನು ಆಶೀರ್ವದಿಸಿದರು. 1994-95ನೇ ಸಾಲಿನ ವಿದ್ಯಾರ್ಥಿಗಳಾಗಿದ್ದ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ಈಗ ನಿವೃತ್ತರಾಗಿರುವ ಸುರೇಶ್ ಗೌಡ ಹಾಗೂ ಭಾರತೀಯ ಸೇನೆಯಲ್ಲಿ ಈಗ ಕರ್ತವ್ಯ ನಿರ್ವಹಿಸುತ್ತಿರುವ ಚಂದ್ರಶೇಖರ ಇವರನ್ನು ಸನ್ಮಾನಿಸಲಾಯಿತು. ಹಿರಿಯ ವಿದ್ಯಾರ್ಥಿಗಳಿಂದ ಶಾಲೆಯ ನೂತನ ಕಟ್ಟಡಕ್ಕೆ ಹೆಚ್.ಎಮ್ ಕ್ಯಾಬೀನ್ ನ್ನು ದೇಣಿಗೆಯಾಗಿ ನೀಡಿದರು.

Related posts

ಬಂಟ್ವಾಳ ಅಬ್ದುಲ್ ರಹಿಮಾನ್‌ ಕೊಲೆ ಪ್ರಕರಣ: ಆರೋಪಿಗಳಿಬ್ಬರನ್ನು ಬೆಳ್ತಂಗಡಿಗೆ ಕರೆತಂದು ಮಹಜರು

Suddi Udaya

ಕಡಿರುದ್ಯಾವರ: ಹೇಡ್ಯದಲ್ಲಿ ಪಿಕಪ್ ಮತ್ತು ಕಾರು ಡಿಕ್ಕಿ

Suddi Udaya

ಅಟಲ್ ಟಿಂಕರ್ ಫೆಸ್ಟ್ 2025: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಾತೃ ಪೂಜನ, ಮಾತೃ ವಂದನ ಮತ್ತು ಮಾತೃ ಭೋಜನ ವಿಶಿಷ್ಟ ಭಾವಪೂರ್ಣ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಅಳದಂಗಡಿಯಲ್ಲಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಇಂದಿನ ವಿದ್ಯಾರ್ಥಿಗಳೇ ಭವಿಷ್ಯದ ಉಜ್ವಲ ಭಾರತವನ್ನು ಮುನ್ನಡೆಸುವ ಪ್ರತಿನಿಧಿಗಳು: ಶಾಸಕ ಹರೀಶ್ ಪೂಂಜ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ : ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!