38.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದೇವರಮನೆಗುಡ್ಡ ರಸ್ತೆಯಲ್ಲಿ ಬೆಳ್ತಂಗಡಿ ಯುವಕರ ಹುಚ್ಚಾಟ: ಪ್ರಕರಣ ದಾಖಲು

ಬೆಳ್ತಂಗಡಿ: ಕೊಟ್ಟಿಗೆಹಾರ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆಗುಡ್ಡದ ನಡುರಸ್ತೆಯಲ್ಲಿ ತಲೆ, ಮುಖದ ಮೇಲೆಲ್ಲ ಕೇಕ್ ಮೆತ್ತಿಕೊಂಡು ಹುಟ್ಟುಹಬ್ಬ ಆಚರಿಸಿ ರಂಪಾಟ ಮಾಡಿದ ಬೆಳ್ತಂಗಡಿ ಮೂಲದ 9 ಮಂದಿ ಯುವಕರನ್ನು ಮೇ 29ರಂದು ಬಣಕಲ್ ಪೊಲೀಸರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯುವಕರು ಸ್ನೇಹಿತನ ಹುಟ್ಟುಹಬ್ಬ ಆಚರಿಸಲು ದೇವರಮನೆಗುಡ್ಡದ ನಿರ್ಜನ ಪ್ರದೇಶವನ್ನು ಆರಿಸಿಕೊಂಡಿದ್ದರು. ನಡುರಸ್ತೆಯಲ್ಲೇ ರಿಕ್ಷಾ, ಕಾರುಗಳನ್ನು ನಿಲ್ಲಿಸಿದ್ದಲ್ಲದೆ ಮದ್ಯಪಾನವನ್ನೂ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲಿನ ರಸ್ತೆ ಕಿರಿದಾಗಿದ್ದು, ಪ್ರಪಾತದ ಸಮೀಪವಿದೆ. ಇಂತಹ ಸ್ಥಳದಲ್ಲಿ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಣೆಗೆ ಇಳಿದಿರುವುದು ಅಪಾಯವನ್ನು, ಆಹ್ವಾನಿಸುತ್ತಿತ್ತು. ಮಾಹಿತಿ ಪಡೆದ ಪೊಲೀಸರು ಯುವಕರನ್ನು ವಶಕ್ಕೆ ತೆಗೆದುಕೊಂಡರು.

Related posts

ಲಯನ್ಸ್ ಕ್ಲಬ್ ವತಿಯಿಂದ ವನಮಹೋತ್ಸವ

Suddi Udaya

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಡಾ.ಗುರುರಾಜ ಕರ್ಜಗಿಯವರಿಂದ ಸರ್ವಧರ್ಮ ಸಮ್ಮೇಳನ 91ನೇ ಅಧಿವೇಶನ ಉದ್ಘಾಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ನ 50ನೇ ವರ್ಷದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಕನ್ನಡ ರಾಜ್ಯೋತ್ಸವದ ಅಂಗವಾಗಿ ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಡಿಪ್ಪೊದಲ್ಲಿ ಉಚಿತ ರಕ್ತದೊತ್ತಡ , ಮಧುಮೇಹ ಪರೀಕ್ಷೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!