ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಿಂದ ಶೇ.100 ಫಲಿತಾಂಶ

ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ2024-25ನೇ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು 100% ಫಲಿತಾಂಶದೊAದಿಗೆ ಅಭೂತಪೂರ್ವ ಸಾಧನೆಯನ್ನು ಮಾಡಿದ್ದಾರೆ. ಇದೇ ತಿಂಗಳಿನಲ್ಲಿ ನಡೆದ ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 372 ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.


ಕಾಲೇಜಿನ ವಿಭಾಗವಾರು ಫಲಿತಾಂಶಗಳ ಪೈಕಿ ಕಂಪ್ಯೂಟರ್ ಸೈನ್ಸ್-೧೦೦%, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ 100%, ಡಾಟಾಸೈನ್ಸ್-100%, ಇಲೆಕ್ಟಾçನಿಕ್ಸ್ ಎಂಡ್ ಕಮ್ಯುನಿಕೇಶನ್- 100 %, ಮೆಕ್ಯಾನಿಕಲ್ ಇಂಜಿನಿಯರಿAಗ್ ವಿಭಾಗ- 100% ಹಾಗೂ ಸಿವಿಲ್ ಇಂಜಿನಿಯರಿಂಗ್ ವಿಭಾಗ- 100% ಫಲಿತಾಂಶವನ್ನು ದಾಖಲಿಸಿವೆ.
ಎಲ್ಲಾ ಅರ್ಹ ವಿದ್ಯಾರ್ಥಿಗಳು ಕ್ಯಾಂಪಸ್ ನೇಮಕಾತಿಯ ಮೂಲಕ ವಿವಿಧ ಕಂಪೆನಿಗಳಿಗೆ ಆಯ್ಕೆಯಾಗಿದ್ದು, ಕೆಲವು ವಿದ್ಯಾರ್ಥಿಗಳು ಈಗಾಗಲೇ ಉದ್ಯೋಗಕ್ಕೆ ಸೇರಿಕೊಂಡಿದ್ದಾರೆ.


ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಿ ಉತ್ತಮ ಫಲಿತಾಂಶವನ್ನು ಪಡೆದುಕೊಂಡ ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಶ್ಲಾಘಿಸಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

Related posts

ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದ ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬೆಳ್ತಂಗಡಿ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಕುವೆಟ್ಟು ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಸಾಮರಸ್ಯದ ಸಂಕ್ರಾಂತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 46 ಮತದಾನ

Suddi Udaya

ಶ್ರೀ.ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ. 100 ಫಲಿತಾಂಶ

Suddi Udaya
error: Content is protected !!