ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ 2024-25 ನೇ ಸಾಲಿನ ವಿದ್ಯಾರ್ಥಿನಿಯರಿಗೆ ಮೈಸೂರಿನ ಪ್ರತಿಷ್ಠಿತ ಕಂಪೆನಿಗಳಲ್ಲಿ ಒಂದಾದ ಶಾಹಿ ಎಕ್ಸ್ಪೋರ್ಟ್ಸ್ ( SHAHI EXPORTS ) ವತಿಯಿಂದ ಮೇ 30 ರಂದು ಕ್ಯಾಂಪಸ್ ಸಂದರ್ಶನ ನಡೆಯಿತು.

ಕಂಪೆನಿಯ ಮಾನವ ಸಂಪನ್ಮೂಲ ವಿಭಾಗದ ಉಪ ವ್ಯವಸ್ಥಾಪಕ ಪ್ರಕಾಶ್ ಅವರು ಕಂಪೆನಿಯ ಧ್ಯೇಯೋದ್ದೇಶ, ಉದ್ಯೋಗದ ವಿಧಾನ ಇತ್ಯಾದಿ ಕುರಿತು ಮಾಹಿತಿ ನೀಡಿದರು.

ಬಳಿಕ, ಬರವಣಿಗೆ ಹಾಗೂ ಮೌಖಿಕ ಸಂದರ್ಶನದ ಮೂಲಕ ವಿದ್ಯಾರ್ಥಿ – ವಿದ್ಯಾರ್ಥಿನಿಯರ ಆಯ್ಕೆ ಪ್ರಕ್ರಿಯೆ ನಡೆಯಿತು. ಮಾನವ ಸಂಪನ್ಮೂಲ ವಿಭಾಗದ ಇನ್ನೋರ್ವ ಅಧಿಕಾರಿ ಸುಮನ್ ರಾಜ್ ಸಹಕರಿಸಿದರು. ಅಂತಿಮವಾಗಿ ಆಯ್ಕೆ ಆದ ಅಭ್ಯರ್ಥಿಗಳನ್ನು ಆಗಸ್ಟ್ ಮೊದಲ ವಾರ ಉದ್ಯೋಗಕ್ಕೆ ಸೇರಲು ಅವಕಾಶ ಮಾಡಿಕೊಡುವುದಾಗಿ ಈ ಸಂದರ್ಭದಲ್ಲಿ ಪ್ರಕಾಶ್ ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಕಾಮತ್ ಸ್ವಾಗತಿಸಿ ಪ್ರಸ್ತಾವಿಸಿದರು.

ಎಸ್.ಡಿ.ಎಂ. ಐ.ಟಿ.ಐ. ವೇಣೂರಿನ ನೇಮಕಾತಿ ಅಧಿಕಾರಿ ಶ್ರೇಯಸ್ ಮತ್ತು ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯ ಕಿರಿಯ ತರಬೇತಿ ಅಧಿಕಾರಿಗಳು ಉಪಸ್ಥಿತರಿದ್ದರು.

ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಹಾಗೂ ನೆಲ್ಯಾಡಿ ಬೆಥನಿ ಐ.ಟಿ.ಐ.ಯ ಒಟ್ಟು 48 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಿದ್ದರು.

ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿ ಪೂರ್ವ ಕಾಲೇಜು ರಾಷ್ಟ್ರ ಮಟ್ಟದ ಜೆ.ಇ.ಇ. ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ

Suddi Udaya

ಇಂದು (ಜ.10): ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ

Suddi Udaya

ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬಸ್ಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆಯೋರ್ವರು ಬಸ್ಸಿನಡಿಗೆ ಸಿಲುಕಿ ದಾರುಣ ಸಾವು

Suddi Udaya

ಉಜಿರೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!