22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

ಬೆಳ್ತಂಗಡಿ: ದ.ಕ. ಜಿಲ್ಲಾ ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘ, ಬೆಳ್ತಂಗಡಿ ತಾಲೂಕು ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ವತಿಯಿಂದ ಶಿವಪ್ರಸಾದ್ ಪುರೋಹಿತರ ಪೌರೋಹಿತ್ಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಭಾ ಕಾರ್ಯಕ್ರಮ ಜೂ.1ರಂದು ಲ್ಯಾಲ ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಕಮ್ಮಾರರ ಸಂಘದ ಅಧ್ಯಕ್ಷ ಆನಂದ ಆಚಾರ್ಯ ಮಾಪಲಾಡಿ ವಹಿಸಿ ಮಾತನಾಡಿದರು.ಉದ್ಘಾಟನೆಯನ್ನು ದ.ಕ.ಜಿಲ್ಲಾ ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ಅಧ್ಯಕ್ಷ ರಮೇಶ್ ಆಚಾರ್ಯ ಕಡೇಶಿವಾಲಯ ನೆರವೇರಿಸಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಲ್ಯಾಲ ವಿಶ್ವಕರ್ಮಾಭ್ಯುದಯ ಸಭಾದ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ, ಶಿವಪ್ರಸಾದ್ ಪುರೋಹಿತರು, ಸವಣಾಲು, ಲ್ಯಾಲ ವಿಶ್ವಕರ್ಮಾಭ್ಯುದಯ ಸಭಾದ ಕಾರ್ಯದರ್ಶಿ ರಾಮ್‌ಪ್ರಸಾದ್ ಎನ್.ಎಸ್. ಗುಂಪಲಾಜೆ, ಲ್ಯಾಲ ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಉಷಾ ಹರಿಪ್ರಸಾದ್ ಆಚಾರ್ಯ, ರೋಹಿತ್ ಆಚಾರ್ಯ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ತಾಲೂಕಿನ ಕಮ್ಮಾರರಿಗೆ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ಪದಾಧಿಕಾರಿಗಳು ಹಾಗೂ ಸ್ವಜಾತಿ ಬಾಂಧವರು ಉಪಸ್ಥಿತರಿದ್ದರು.

ಹರೀಶ್ ಆಚಾರ್ಯ ಸ್ವಾಗತಿಸಿದರು.ರುಕ್ಮಯ ಆಚಾರ್ಯ ಕನ್ನಾಜೆ ವಂದಿಸಿದರು.

Related posts

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.89.65 ಫಲಿತಾಂಶ

Suddi Udaya

ಯೂಟ್ಯೂಬರ್ ಗಳ ಮೇಲೆ ಹಲ್ಲೆ ಖಂಡಿಸಿ ಎಸ್.ಡಿ.ಪಿ.ಐ.ಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಲಾಯಿಲ ಹಾಗೂ ನಗರ ಮಹಾಶಕ್ತಿಕೇಂದ್ರದ ಸಭೆ

Suddi Udaya

ಶ್ರೀ. ಧ. ಮಂ. ಪ. ಪೂ.ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ

Suddi Udaya
error: Content is protected !!