23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಕುಂಡದಬೆಟ್ಟು: ಮಂಜುಶ್ರೀ ಭಜನಾ ಮಂಡಳಿಯಿಂದ ಉಚಿತ ಪುಸ್ತಕ ವಿತರಣೆ

ಕುಂಡದಬೆಟ್ಟು: ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ಕುಕ್ಕೇಡಿ ನಿಟ್ಟಡೆ ಗ್ರಾಮಗಳ ೮ರಿಂದ ದ್ವಿತೀಯ ಪಿಯುಸಿ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತ ಪುಸ್ತಕ ವಿತರಣೆ ಮಂಜುಶ್ರೀ ಭಜನಾ ಮಂದಿರದಲ್ಲಿ ಜರುಗಿತು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ವಿಭಾಗದ ಕಿರಿಯ ತರಬೇತಿ ಅಧಿಕಾರಿ ಶ್ರೀಮತಿ ಜ್ಯೋತ್ಸ್ನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಪುಸ್ತಕ ನೀಡಿದಂತಹ ಸಂಸ್ಥೆಗೆ ವಿದ್ಯಾರ್ಥಿಗಳು ಯಾವಾಗಲೂ ಚಿರಋಣಿಗಳಾಗಿರಬೇಕು, ಹದಿಹರೆಯದ ವಿದ್ಯಾರ್ಥಿಗಳು ಸಾಧ್ಯವಾದಷ್ಟು ಆರೋಗ್ಯಕ್ಕೆ ಹಾನಿಕರವಾದ ಕೆಲವು ತಂಪು ಪಾನೀಯ, ಮಧ್ಯಪಾನ, ಮಾದಕ ವ್ಯಸನಗಳ ಬಗ್ಗೆ ಜಾಗೃತಿ ಹೊಂದಬೇಕು ಅವುಗಳ ಸೇವನೆಯಿಂದ ಆಗುವಂತಹ ದುಷ್ಪರಿಣಾಮಗಳ ಬಗ್ಗೆ ವಿಸ್ತೃತವಾದ ಮಾಹಿತಿಯನ್ನು ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಮಂಡಳಿಯ ಅಧ್ಯಕ್ಷ ರವಿಕುಮಾರ್ ಕೆ.ವೈ. ವಹಿಸಿ ಮಾತನಾಡಿ ವಿದ್ಯಾರ್ಥಿಗಳು ಪಾಠ ಪುಸ್ತಕಗಳನ್ನು ಕಲಿಯುದರ ಜೊತೆ ಜೊತೆಗೆ ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಂಡು ದೇಶದ ಸಂಸ್ಕೃತಿ ಆಚಾರ ವಿಚಾರಗಳನ್ನು ಗೌರವಿಸುತ್ತಾ ಪಾಲಿಸಬೇಕೆಂದು ಕರೆ ನೀಡಿದರು.

ವೇದಿಕೆಯಲ್ಲಿ ಮಂಡಳಿಯ ಗೌರವಾಧ್ಯಕ್ಷ ಅನಿಲ್ ಹೆಗ್ಡೆ ಕೇದಗೆವನ, ಕಾರ್ಯದರ್ಶಿ ತನಿಯಪ್ಪ ರಾಣ್ಯ, ಜೊತೆ ಕಾರ್ಯದರ್ಶಿ ಸಂತೋಷ್ ಕುಲಾಲ್ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಒಟ್ಟು 110 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆಯನ್ನು ಮಾಡಲಾಯಿತು. ಎಸ್‌ಎಸ್‌ಎಲ್‌ಸಿಯಲ್ಲಿ ೯೦% ಅಂಕ ಪಡೆದ ೩ ವಿದ್ಯಾರ್ಥಿಗಳಿಗೆ ಜಗನ್ನಾಥ ದೇವಾಡಿಗರವರ ಪ್ರಯೋಜಕತ್ವದಲ್ಲಿ ನಗದು ಬಹುಮಾನದೊಂದಿಗೆ ಅಭಿನಂದಿಸಲಾಯಿತು.

ಕು. ಪ್ರೇಕ್ಷಾ, ಕು. ದಿವ್ಯ, ಕು. ಪ್ರಣಮ್ಯ ಪ್ರಾರ್ಥಿಸಿದರು. ಮಾಜಿ ಅಧ್ಯಕ್ಷ ಭರತ್ ರಾಜ್ ಅಮೈ ಪ್ರಾಸ್ತಾವಿಸಿ ಸ್ವಾಗತಿಸಿದರು. ನಿಕಟಪೂರ್ವ ಅಧ್ಯಕ್ಷ ಜಗನ್ನಾಥ ದೇವಾಡಿಗ ನಿರೂಪಿಸಿದರು. ಗೌರವಾಧ್ಯಕ್ಷ ಅನಿಲ್ ಹೆಗ್ಡೆ ವಂದಿಸಿದರು.

Related posts

ಕುಕ್ಕೇಡಿ ಬುಳೆಕ್ಕರ ಶ್ರೀ ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ತೃಪ್ತಿ

Suddi Udaya

ಪದ್ಮುಂಜದಲ್ಲಿ ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿ ಬಂಧನ

Suddi Udaya

ಎ.13-22: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಎ.25 : ಭದ್ರಕಾಳಿ ದೇವಿಯ ಪ್ರತಿಷ್ಠಾ ಮಹೋತ್ಸವ

Suddi Udaya

ಬೆಳ್ತಂಗಡಿ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

Suddi Udaya
error: Content is protected !!