September 6, 2026
ಶಿಕ್ಷಣ ಸಂಸ್ಥೆ

ಮಾಲಾಡಿ ಸ. ಉ. ಪ್ರಾ.ಶಾಲಾ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಬುಕ್ ಹಾಗೂ ಕೊಡೆ ವಿತರಣೆ

ಮಾಲಾಡಿ: ಜೂ. 2 ರಂದು ಸ. ಉ. ಪ್ರಾ. ಶಾಲೆ ಮಾಲಾಡಿಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ತುಳಸಿ ಹಾಗೂ ಶ್ರೀಮತಿ ಜಯಂತಿ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಎಸ್ ಡಿ ಎಂ ಸಿ ಅಧ್ಯಕ್ಷರಾದ ಹಕೀಮ್ ರವರು ಅಧ್ಯಕ್ಷತೆ ವಹಿಸಿದ್ದರು. ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಮಡಂತ್ಯಾರು ಇದರ ಅಧ್ಯಕ್ಷರಾದ ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಇವರು ಪ್ರತಿವರ್ಷದಂತೆ ಈ ವರ್ಷವೂ ಎಲ್ಲಾ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ನೋಟ್ ಬುಕ್ ಗಳನ್ನು ಉಚಿತವಾಗಿ ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಎಸ್. ಡಿ ಎಂ. ಸಿ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಲತಾ ಹಾಗೂ ಎಲ್ಲಾ ಎಸ್‌.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು. ಸರಕಾರದಿಂದ ಉಚಿತವಾಗಿ ನೀಡುವ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಲತಾ ಕೆ. ಇವರು ಸ್ವಾಗತಿಸಿ ಇಲಾಖಾ ಮಾಹಿತಿಯನ್ನು ನೀಡಿದರು. ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಜಯರಾಜ್ ಜೈನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ಪ್ರಶಾಂತ್ ಕಾಮತ್ ಇವರು ವಂದಿಸಿದರು.

Related posts

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಚುನಾವಣೆ

Suddi Udaya

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಕಾರ್ಯಾಗಾರ ಸಂಪನ್ನ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ನಿಡ್ಲೆ : ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ದಕ ಎಲ್ಲಾ ಶಾಲೆ, ಪಿಯು ಕಾಲೇಜ್ ಗಳಿಗೆ ರಜೆ

Suddi Udaya

ನೀಟ್ ಫಲಿತಾಂಶ : ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya
error: Content is protected !!