July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜು ಪ್ರಾರಂಭೋತ್ಸವ

ಮುಂಡಾಜೆ: ಪದವಿ ಪೂರ್ವ ಕಾಲೇಜು ಮುಂಡಾಜೆ ಇಲ್ಲಿನ 2025 -26 ನೇ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಕಾಲೇಜಿನ ಪ್ರಾರಂಭೋತ್ಸವವು ಜೂ.2ರಂದು ನಡೆಯಿತು.

ಆಡಳಿತ ವೃಂದ, ಉಪನ್ಯಾಸಕ ವೃಂದ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಹೂವನ್ನು ನೀಡಿ ಬರಮಾಡಿಕೊಂಡರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ, ಶೈಕ್ಷಣಿಕ ವರ್ಷದ ಶುಭಾರಂಭ ಕೈಗೊಳ್ಳಲಾಯಿತು.

ಅಧ್ಯಕ್ಷತೆ ವಹಿಸಿದ್ದ ಶತಾಬ್ದಿ ವಿದ್ಯಾಲಯ ಸಮಿತಿಯ ಸಂಚಾಲಕ ನಾರಾಯಣ ಫಡ್ಕೆ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಕೇವಲ ಅಂಕಗಳನ್ನು ಗಳಿಸುವುದು ಮುಖ್ಯವಲ್ಲ, ಜೀವನ ಕೌಶಲಗಳನ್ನು ಕಲಿತು ಮೌಲ್ಯಾಧಾರಿತ ಜೀವನವನ್ನು ನಡೆಸುವುದು ಮುಖ್ಯ ಎಂದರು.

ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ, ಇದರ ಕಾರ್ಯದರ್ಶಿ ನಾರಾಯಣ ಗೌಡ ಕೊಳಂಬೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಾಚಾರ್ಯೆ ಗೀತಾ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ಪದ್ಮನಾಭ ಬಿ.ಕೆ ವಂದಿಸಿದರು ಕನ್ನಡ ಉಪನ್ಯಾಸಕಿ ವಸಂತಿ ನಿರೂಪಿಸಿದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಡಾ|| ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ 30ನೇ ವರ್ಷದ ರಾಜ್ಯಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya

ಭಾರತೀಯ ಸೇನೆಯಲ್ಲಿ ಸುಮಾರು 29 ವರ್ಷಗಳ ಕಾಲ ದೇಶದ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದ ನಿವೃತ್ತ ಸೈನಿಕ ಕುಕ್ಕೇಡಿಯ ಚಂದ್ರಹಾಸ ಪೂಜಾರಿ ನಿಧನ: ತಿಂಗಳ ಅಂತರದಲ್ಲಿ ‌ ಪತಿ -ಪತ್ನಿ ಸಾವು

Suddi Udaya

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಗೇರುಕಟ್ಚೆ: ಸಾವಿರ ಕದಳಿ ಬಾಳೆ ಗೊನೆ ಚಮತ್ಕಾರ

Suddi Udaya

ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ಗಾಂಧೀಜಿ ಜಯಂತಿ ಆಚರಣೆ

Suddi Udaya

ಕಕ್ಯಪದವು: ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ವೃತ್ತಿಪರ ಕೋಸ್೯ಗಳ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!