ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಅನುಗ್ರಹ ಕಾಲೇಜು ಪ್ರಾರಂಭೋತ್ಸವ ಹಾಗೂ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

ಉಜಿರೆ: ಅನುಗ್ರಹ ಕಾಲೇಜಿನಲ್ಲಿ 2025-26ನೇ ಸಾಲಿನ ಕಾಲೇಜು ಪ್ರಾರಂಭೋತ್ಸವ ಹಾಗೂ ಪ್ರಥಮ ಪಿಯುಸಿಗೆ ಸೇರ್ಪಡೆಗೊಂಡ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದ ಉದ್ಘಾಟನೆಯು ಜೂ.2ರಂದು ಕಾಲೇಜಿನ ಆಡಿಟೋರಿಯಮ್‌ನಲ್ಲಿ ಜರಗಿತು.

ಕಾರ್ಯಕ್ರಮವನ್ನು ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಚಾಲಕ ವಂ. ಫಾ. ಅಬೆಲ್ ಲೋಬೋ ದೀಪ ಬೆಳಗಿಸಿ ಉದ್ಘಾಟಿಸಿ ಶಿಕ್ಷಣದ ಜೊತೆಯಲ್ಲಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ವಾತವರಣ ಕಾಲೇಜಿನಲ್ಲಿ ಲಭಿಸುತ್ತದೆ. ವಿದ್ಯಾರ್ಥಿಗಳು ಸರ್ವತೋಮುಖ ಬೆಳವಣಿಗೆಯಲ್ಲಿ ತಮ್ಮನ್ನು ತೋಡಗಿಸಿಕೊಂಡು ವ್ಯಕ್ತಿತ್ವ ವಿಕಸನಗೊಳಿಸಬೇಕು ಎಂದು ನೂತನ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ವಂ.ಫಾ. ವಿಜಯ್ ಲೋಬೋ ಕಾಲೇಜಿನ ಶೈಕ್ಷಣಿಕ ಕಾರ್ಯ ಚಟುವಟಿಕೆಗಳು ಹಾಗು ಕಾಲೇಜಿನ ನೀತಿ ನಿಯಮಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿ, ನೈತಿಕ ಹಾಗೂ ಮಾಲ್ಯಾಧರಿತ ಶಿಕ್ಷಣವು ವಿದ್ಯಾರ್ಥಿಗಳನ್ನು ಪರಿಪೂರ್ಣಗೊಳಿಸುತ್ತದೆ ಎಂದು ಹೇಳಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿಗೆ ದಾಖಲಾತಿ ಪಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವು ಉಪನ್ಯಾಸಕ ಅರುಣ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಬಳಂಜ ಬಿವಿಎಲ್ ವಾಲಿವಾಲ್ ಪಂದ್ಯಾವಳಿ, ಕೋಟ್ಯಾನ್ ರಾಕರ್ಸ್ ಚಾಂಪಿಯನ್, ಇಕೋಪ್ರೇಶ್ ರನ್ನರ್

Suddi Udaya

ಮಡಂತ್ಯಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಅವರನ್ನು ಅಭಿನಂದಿಸಿದ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮುಹಮ್ಮದ್ ಹನೀಫ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಹಿಳಾ ಮತ್ತು ಜೂನಿಯರ್ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ವೇಣೂರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

Suddi Udaya
error: Content is protected !!