September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌ಡಿಎಂ ಪ.ಪೂ. ಕಾಲೇಜಿನ ಉಪನ್ಯಾಸಕ ಮಹಾವೀರ ಜೈನ್ ರಿಗೆ ಪಿಹೆಚ್.ಡಿ ಪದವಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಮಹಾವೀರ ಜೈನ್ ಇಚ್ಲಂಪಾಡಿ ಇವರು ಹಂಪಿ ಕನ್ನಡ ವಿಶ್ವ ವಿದ್ಯಾಲಯದಿಂದ ಪಿಹೆಚ್.ಡಿ ಪದವಿ ಪಡೆದಿದ್ದಾರೆ.

ಉಜಿರೆಯ ಡಾ. ಹಾಮಾನಾ ಸಂಶೋಧನಾ ಕೇಂದ್ರದ ಮೂಲಕ ಡಾ.ಬಿ.ಪಿ ಸಂಪತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಕನ್ನಡ ವಿಶ್ವವಿದ್ಯಾಲಯ ಹಂಪಿಗೆ ಸಲ್ಲಿಸಿದ ಕನ್ನಡ ಜೈನ ಸಾಹಿತ್ಯದಲ್ಲಿ ಕರ್ಮಸಿದ್ಧಾಂತದ ಸ್ವರೂಪ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಹಂಪಿ ವಿಶ್ವವಿದ್ಯಾಲಯವು ಪಿಹೆಚ್.ಡಿ ಪದವಿಯನ್ನು ನೀಡಿದೆ.

ಇವರು ಧಾರ್ಮಿಕ ಉಪನ್ಯಾಸಕರು, ಅನೇಕ ಶಾಸ್ತ್ರದಾನ ಪುಸ್ತಕಗಳ ಸಂಪಾದಕರು, ಚಾವಡಿ ಚರ್ಚೆ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಿದ್ದಾರೆ. ನೆಲ್ಯಾಡಿ ಜೇಸಿಐ ಇದರ ಪೂರ್ವಾಧ್ಯಕ್ಷರು ಹಾಗೂ ಭಾರತೀಯ ಜೈನ್ ಮಿಲನ್ ಇದರ ಇಚ್ಲಂಪಾಡಿ ಶಾಖೆಯ ಪೂರ್ವಾಧ್ಯಕ್ಷರು ಕೂಡ ಆಗಿದ್ದಾರೆ.

ಇವರನ್ನು ಸಂಸ್ಥೆಯ ಅಧ್ಯಕ್ಷರಾದ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು, ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್, ಡಾ. ಸತೀಶ್ಚಂದ್ರ. ಎಸ್ ಹಾಗೂ ಪ್ರಾಂಶುಪಾಲ ಪ್ರಮೋದ್ ಕುಮಾರ್. ಬಿ ಯವರು ಅಭಿನಂದಿಸಿದರು.

Related posts

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧನುಶ್ರೀ ಎಸ್ ಕುಲಾಲ್ ತೃತೀಯ

Suddi Udaya

ನಡ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ ಮತ್ತು ವಾರ್ಷಿಕ ಮಹಾಸಭೆ

Suddi Udaya

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ: ಬಿಡ್ಡಿಂಗ್ ಮಾದರಿಯ 8 ತಂಡಗಳ ನಿಶಾಂತ್ ಟ್ರೋಫಿ 2023 ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರ ಭೇಟಿ

Suddi Udaya

ಬಳಂಜ:ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ದೀಪಾವಳಿ ಸಂಭ್ರಮ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಡಿ.ಹರ್ಷೇಂದ್ರ ಕುಮಾರ್ ಭೇಟಿ

Suddi Udaya
error: Content is protected !!