September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕರ್ನೋಡಿ ಸ.ಉ.ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ನೋಟ್ ಬುಕ್-ಲೇಖನ ಸಾಮಗ್ರಿಗಳ ವಿತರಣೆ

ಬೆಳ್ತಂಗಡಿ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕರ್ನೋಡಿ ಲಾಯಿಲದಲ್ಲಿ ಜೂ.2ರಂದು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಉಚಿತ ನೋಟ್ ಬುಕ್ ಹಾಗೂ ಲೇಖನ ಸಾಮಗ್ರಿಗಳ ವಿತರಣ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಂತಿ ಎಂ.ಕೆ, ಉಪಾಧ್ಯಕ್ಷೆ ಶ್ರೀಮತಿ ಸುಗಂಧಿ ಜಗನ್ನಾಥ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾಧಿಕಾರಿ ಯಶೋಧರ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗಣೇಶ್ ಆರ್ , ಕೋಶಾಧಿಕಾರಿ ಸದಾಶಿವ ಕಕ್ಕೇನ, ಉಪಾಧ್ಯಕ್ಷ ಮುಷ್ತಾಕ್ ಕಾಶಿಬೆಟ್ಟು, ಎಸ್.ಡಿ.ಎಂ.ಸಿ ಅಧ್ಯಕ್ಷೆ ಶ್ರೀಮತಿ ಸೌಮ್ಯಾ ಭಾಗವಹಿಸಿದರು.

35,000 ಮೌಲ್ಯದ ನೋಟ್ ಬುಕ್ ಹಾಗೂ ಲೇಖನ ಸಾಮಗ್ರಿಗಳನ್ನು ಶಾಲಾ ಮಕ್ಕಳಿಗೆ ವಿತರಣೆ ಮಾಡಲಾಯಿತು. ಶಾಲಾ ಮುಖ್ಯ ಶಿಕ್ಷಕ ಜಗನ್ನಾಥ ಎಂ. ಸ್ವಾಗತಿಸಿ, ಸಹ ಶಿಕ್ಷಕಿ ಶ್ರೀಮತಿ ಉಷಾ ಧನ್ಯವಾದಗೈದರು. ಸಹ ಶಿಕ್ಷಕರ ಕೃಷ್ಣ ಕುಮಾರ್ ನಿರೂಪಿಸಿದರು.

ಸಹ ಶಿಕ್ಷಕಿಯರಾದ ಶ್ರೀಮತಿ ಗಂಗಾರಾಣಿ ನಾ ಜೋಷಿ, ಶ್ರೀಮತಿ ತ್ರಿಶಾಲ, ಶ್ರೀಮತಿ ಲೀನಾ ಡಿಸೋಜಾ ಕಾರ್ಯಕ್ರಮಕ್ಕೆ ಸಹಕರಿಸಿದರು. ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಪೋಷಕರು, ಶಾಲಾ ಹಳೆ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಗುರುವಾಯನಕೆರೆ ಅರೆಮಲೆಬೆಟ್ಟಕ್ಕೆ ಭೇಟಿ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಅನುಗ್ರಹ ಆಂ.ಮಾ. ಶಾಲೆ ಬಾಲಕರ ತಂಡಕ್ಕೆ ಪ್ರಶಸ್ತಿ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಗ್ರಾಮಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಜಿರೆ-ಹೊಸಪಟ್ಣದಲ್ಲಿ ಹೊನಲು ಬೆಳಕಿನ ಪುರುಷರ 60ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಸುಲ್ಕೇರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!