September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯ ನೋಬರ್ಟ್ ಮಾರ್ಟಿಸ್ ರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ ನೋಬರ್ಟ್ ಮಾರ್ಟಿಸ್ ರವರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ಮೇ 31ರಂದು ನಡೆಯಿತು.

ಅಂಡಿಂಜೆ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಮೋಹನ ಅಂಡಿಂಜೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಪ್ರಾಂಶುಪಾಲರ ಉತ್ತಮ ವ್ಯಕ್ತಿತ್ವವನ್ನು, ಕಾಲೇಜಿನಲ್ಲಿ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಅಭಿನಂದಿಸಿ ಅವರ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದರು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಚಂದ್ರಶೇಖರ ಭಟ್, ಸರ್ಕಾರಿ ಪದವಿಪೂರ್ವ ಕಾಲೇಜು ಅಳದಂಗಡಿಯ ಪ್ರಾಂಶುಪಾಲ ಸನ್ನಿ, ನಡ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್, ಮುನಿಯಾಲು ಸರ್ಕಾರಿ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕಿ ಜಯಶ್ರೀ, ಸರ್ಕಾರಿ ಪ್ರೌಢಶಾಲೆ ಕೊಕ್ರಾಡಿಯ ಮುಖ್ಯೋಪಾಧ್ಯಾಯ ಮಹಮ್ಮದ್ ರಿಯಾಜ್ ಮತ್ತು ಇತರ ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಾಂಶುಪಾಲರ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದರು. ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯರು, ಊರಿನ ಗಣ್ಯರು, ಪೋಷಕರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ದಯಾನಂದ ಸ್ವಾಗತಿಸಿ, ಪ್ರಾಂಶುಪಾಲರು ಕಾಲೇಜಿಗೆ ನೀಡಿದ ಸೇವೆಯನ್ನು ಅಭಿನಂದಿಸಿ ಅವರ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದರು. ಉಪನ್ಯಾಸಕರಾದ ಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಸುಷ್ಮಾ ವಂದಿಸಿದರು.

Related posts

ಉರುವಾಲು: ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆ: ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಕಾರ್ಫ್ ದಿನ ಆಚರಣೆ

Suddi Udaya

ನಾರಾವಿ: ಶ್ರೀ ಸೂರ್ಯ ಫ್ರೆಂಡ್ಸ್ ಮಂಚಕಲ್ಲುಇದರ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುವೆಟ್ಟು ಬೂತ್ ಸಂಖ್ಯೆ 117 ಮತ್ತು 118 ರ ಮತಗಟ್ಟೆಗೆ ಕ್ಯಾ| ಬ್ರಿಜೇಶ್ ಚೌಟ ಹಾಗೂ ಗಣೇಶ್ ಕಾರ್ಣಿಕ ಭೇಟಿ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಜಾತ್ರಾ ಮಹೋತ್ಸವ, ಆಮಂತ್ರಣ ದಶಮಾನೋತ್ಸವ ಸಂಭ್ರಮ: ಉದ್ಯಮಿ ಮೋಹನ್ ಕುಮಾರ್‌ರವರಿಂದ ಅಮ್ಯೂಸ್‌ಮೆಂಟ್ ಉದ್ಘಾಟನೆ

Suddi Udaya
error: Content is protected !!