25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ನ್ಯಾಚುರೋಪತಿ ಕಾಲೇಜು ವತಿಯಿಂದ “ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ್‍ಯಾಲಿ”

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಮೇ 31ರಂದು ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ್‍ಯಾಲಿಯನ್ನು ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ನೆರವೇರಿಸಿ ಮಾತನಾಡಿ ಸಮಾಜದಲ್ಲಿ ಯುವ ಜನತೆ ತಂಬಾಕು ಹಾಗೂ ದುಷ್ಟ ಚಟಗಳಿಂದ ಪೀಡಿತರಾಗಿದ್ದು ಅದರ ನಿರ್ಮೂಲನೆ ಯಾಗಬೇಕು ಹಾಗೂ ಸಮಾಜ ಜಾಗೃತವಾಗಬೇಕು ಎಂಬ ನಿಟ್ಟಿನಲ್ಲಿ ಕಾಲೇಜಿನಿಂದ ಉಜಿರೆಯ ಮುಖ್ಯ ವೃತ್ತದ ತನಕ ಸುಮಾರು ೫೦೦ಕ್ಕೂ ಮಿಕ್ಕಿ ವೈದ್ಯ ವಿದ್ಯಾರ್ಥಿಗಳೊಂದಿಗೆ ಜಾಗೃತ ರ್‍ಯಾಲಿಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲ ಡಾ. ಸುಜಾತ ದಿನೇಶ್ ಹಾಗೂ ಡೀನಗಳಾದ ಡಾ. ಶಿವಪ್ರಸಾದ್ ಶೆಟ್ಟಿ, ಡಾ. ಗೀತಾ ಬಿ ಶೆಟ್ಟಿ, ಡಾ. ಬಾಲಕೃಷ್ಣ ಶೆಟ್ಟಿ, ಹಾಗೂ ಉಪನ್ಯಾಸಕ ಬಂಧುಗಳು, ಸಿಬ್ಬಂದಿ ವರ್ಗದವರು ಮತ್ತು ವೈದ್ಯ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಭಾಗವಹಿಸಿದರು ಮತ್ತು ಬೆಳ್ತಂಗಡಿ ಪೊಲೀಸ್ ಇಲಾಖೆಯ ವೃತ್ತ ನಿರೀಕ್ಷಕರು, ಯು ಪ್ಲೇಸ್ ದೃಶ್ಯ ಮಾಧ್ಯಮದವರು ಸಹಕರಿಸಿದರು.

ಕಾರ್ಯಕ್ರಮವನ್ನು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ಸಂಯೋಜಕ ಧರ್ಮೇಂದ್ರ ಕುಮಾರ್ ದೈಹಿಕ ನಿರ್ದೇಶಕರು, ಡಾ. ಮೇಘನಾ ಗೌಡ ಹಾಗೂ ವಿದ್ಯಾರ್ಥಿಗಳು ನಿರ್ವಹಿಸಿದರು.

Related posts

ಗ್ರಾಮ ಪಂಚಾಯತಿ ಕಲಿಕಾ ಕೇಂದ್ರಗಳ ಯಶೋಗಾಥೆಗಳ ದಾಖಲೀಕರಣ ಕುರಿತು ತರಬೇತಿ: ಉಜಿರೆ – ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರು, ಪಿಡಿಓ ಭಾಗಿ

Suddi Udaya

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವನ್ನು ರಕ್ಷಿಸಿದ ಗೃಹ ರಕ್ಷಕ ದಳದ ಸಿಬ್ಬಂದಿ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾಬಂಧನ

Suddi Udaya

ಮೋದಿ ಅಭಿಮಾನಿ ಶಿಶಿಲ ದೇನೋಡಿ ಯುವ ಬ್ರಿಗೇಡ್‌ ಕಾರ್ಯಕರ್ತ ತಿಲಕ್ ರ ಮದುವೆ: ಮೋದಿಮಯವಾಗಿ ಪರಿವರ್ತನೆಯಾದ ಮದುವೆ ಮಂಟಪ: “ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು” ಎಂಬ ಸಂದೇಶ

Suddi Udaya

ಉಜಿರೆ: ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ‘ಪ್ರತಿಭಾ ಸಮ್ಮಾನ್-2025’

Suddi Udaya
error: Content is protected !!