27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಜಿರೆ ಪಿಎಂಶ್ರೀ ಸ.ಹಿ.ಪ್ರಾ.ಶಾಲಾ ಪ್ರಾರಂಭೋತ್ಸವ

ಬಜಿರೆ: ಇಲ್ಲಿಯ ಪಿಎಂಶ್ರೀ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಜಿರೆಯಲ್ಲಿ ಶಾಲಾ ಪ್ರಾರಂಭೋತ್ಸವವು ಕಾರ್ಯಕ್ರಮವು ಜೂ.2ರಂದು ವಿಜೃಂಭಣೆಯಿಂದ ನಡೆಯಿತು.

ಮಕ್ಕಳನ್ನು ಬ್ಯಾಂಡ್ ಸೆಟ್ ಮೂಲಕ ಮೆರವಣಿಗೆಯಲ್ಲಿ ಬರಮಾಡಿಕೊಂಡು ವಿದ್ಯಾರ್ಥಿಗಳಿಗೆ ಹೂವನ್ನು ನೀಡಿ ಸ್ವಾಗತಿಸಿ, ಸಿಹಿ ನೀಡಿ ಬರಮಾಡಿಕೊಂಡರು.

ಈ ಸಂದರ್ಭ ಕಾರ್ಯಕ್ರಮದಲ್ಲಿ ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ್, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ದಿನೇಶ್, ಉಪಾಧ್ಯಕ್ಷೆ ಸುಶೀಲ, ಶಾಲಾ ಮುಖ್ಯೋಪಾಧ್ಯಾಯಿನಿ ಕಮಲಾಜಿ ಎಸ್. ಜೈನ್, ಎಸ್‌ಡಿಎಂಸಿ ಸದಸ್ಯ ಕಾಶಿನಾಥ್ ಹೆಗ್ಡೆ, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಶಿವಾನಂದ ಗೌಡ ಹಾಗೂ ತಾಯಂದಿರ ಸಮಿತಿ ಅಧ್ಯಕ್ಷೆ ಜಯಶ್ರೀ, ಎಸ್‌ಡಿಎಂಸಿ ಸದಸ್ಯರು, ತಾಯಂದಿರ ಸಮಿತಿಯ ಸದಸ್ಯರು, ಶಾಲಾ ಶಿಕ್ಷಕವೃಂದದವರು, ಬಿಸಿಯೂಟ ಸಿಬ್ಬಂದಿಗಳು, ಪೋಷಕರು ಉಪಸ್ಥಿತರಿದ್ದು ಸಹಕರಿಸಿದರು.

ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ಹಾಗೂ ಬ್ಯಾಗ್ ವಿತರಿಸಲಾಯಿತು. ಮಧ್ಯಾಹ್ನ ಸಿಹಿ ಊಟದೊಂದಿಗೆ ಮೊಟ್ಟೆಯನ್ನು ಮತ್ತು ಬಾಳೆಹಣ್ಣನ್ನು ವಿತರಿಸಲಾಯಿತು.

Related posts

ಶಾಸಕ ಹರೀಶ್ ಪೂಂಜರವರಿಂದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಪೀಠಾಧಿಪತಿ ಶ್ರೀ ಪ್ರಣವಾನಂದ ಸ್ವಾಮೀಜಿರವರ ಭೇಟಿ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

Suddi Udaya

ಶಾಂತಶ್ರೀ ಪ್ರಶಸ್ತಿಗೆ ವಿದುಷಿ ವಿದ್ಯಾ ಮನೋಜ್ ಆಯ್ಕೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ಗೆ ಅಭಿವೃದ್ಧಿ ಅಧಿಕಾರಿಯಾಗಿ ರಶ್ಮಿ ಬಿ.ಪಿ. ವರ್ಗಾವಣೆ

Suddi Udaya
error: Content is protected !!