September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆ ನೇತೃತ್ವದಲ್ಲಿ ಸ್ಥಳೀಯ ಶಾಲಾ ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

ಬೆಳ್ತಂಗಡಿ: ಸಮಾಜಮುಖಿ ಚಿಂತನೆಗಳೊಂದಿಗೆ ಒಂದಷ್ಟು ಯುವಕರು ಸೇರಿಕೊಂಡು ಸಮಾಜದ ನೋವಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವ ರಾಜಕೇಸರಿ ಸಂಘಟನೆಯ ಕಾರ್ಯವೈಖರಿ ಶ್ಲಾಘನೀಯ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ಜೂ.1ರಂದು ಕುತ್ಯಾರು ಹೊಸಮನೆ ಕ್ರೀಡಾಂಗಣದಲ್ಲಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಇದರ 13ನೇ ವರ್ಷದ ಪಾದಾರ್ಪಣೆ ಪ್ರಯುಕ್ತ ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಮುಡಿಪು ಇದರ ಆಶ್ರಯದಲ್ಲಿ ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ನಡೆದ ಸ್ಥಳೀಯ ಶಾಲಾ ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ, ಉತ್ತಮ ಅಂಕ ಪಡೆದ ಮಕ್ಕಳಿಗೆ ಸನ್ಮಾನ ಹಾಗೂ ಸಮಾಜ ರತ್ನ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಮಾಜದ ಹಲವಾರು ಅಶಕ್ತ ಕುಟುಂಬಗಳಿಗೆ ನೆರವು, ಶೌಚಾಲಯ ಸ್ವಚ್ಛಾಲಯ ಸೇರಿದಂತೆ ವಿವಿಧ ರೀತಿಯಲ್ಲಿ ಸಮಾಜ ಸೇವೆಗಳನ್ನು ಮಾಡುತ್ತಿರುವ ರಾಜಕೇಸರಿ ಸಂಘಟನೆ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ಹಾಗೂ ಬ್ಯಾಗ್ ಹಾಗೂ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸುವ ಮೂಲಕ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಕೆಲಸವನ್ನು ಮಾಡುತ್ತಿರುವುದು ಇತರರಿಗೆ ಮಾದರಿ. ಸಂಘಟನೆಯ ಪ್ರತಿಯೊಂದು ಕಾರ್ಯ ಯೋಜನೆಗಳಿಗೆ ಸದಾ ಬೆಂಬಲಿನಾಗಿ ಇರುತ್ತೇನೆ ಎಂದು ಹೇಳಿದರು.

ಸಭೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಹಾಗೂ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಸಮಾಜ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸುಮಾರು ೧೪೦ ಮಕ್ಕಳಿಗೆ ಉಚಿತ ಪುಸ್ತಕ, ಬ್ಯಾಗ್ ನೀಡಲಾಯಿತು.

ಸಾನಿಧ್ಯ ಸಮೂಹ ಸಂಸ್ಥೆಯ ಆಡಳಿತ ಅಧಿಕಾರಿ ವಸಂತ ಶೆಟ್ಟಿ, ಪ್ರಶಸ್ತಿ ಪ್ರಧಾನ ಮಾಡಿ ಶುಭ ಹಾರೈಸಿದರು. ಜ್ಞಾನ ಮಂದಾರ ಶೈಕ್ಷಣಿಕ ಸಾಂಸ್ಕೃತಿಕ ಸೇವಾ ಟ್ರಸ್ಟ್ ಬೆಂಗಳೂರು ಸಂಸ್ಥಾಪಕ ಹೆಚ್. ಸೋಮಶೇಖರ್ ಪುಸ್ತಕ ವಿತರಣೆ ಮಾಡಿದರಲ್ಲದೇ ದೀಪಕ್ ಜಿ. ಅವರ ಸೇವಾ ಕಾರ್ಯ ಗುರುತಿಸಿ ಸಂಸ್ಥೆಯ ಪರವಾಗಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ಬೆಳ್ತಂಗಡಿ ಅಧ್ಯಕ್ಷ ಪ್ರಸಾದ್ ಶೆಟ್ಟಿ ಎಣಿಂಜೆ, ವಿಜಯವಾಣಿ ವರದಿಗಾರ ಮನೋಹರ ಬಳೆಂಜ, ಉದ್ಯಮಿ ಕರುಣಾಕರ ಬಂಗೇರ, ಸಂಜೀವ ಮೂಲ್ಯ, ಸಂತೋಷ್ ಕೊಲ್ಯ, ವಿನೋದ್ ಪೂಜಾರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ದೀಕ್ಷಿತ್ ಗಾಣಿಗ ಕಾರ್ಯಕ್ರಮ ನಿರೂಪಿಸಿದರು., ವಿಜಯ ಕಂಗಿತ್ತಿಲ್ ಸ್ವಾಗತಿಸಿ, ಸಂದೀಪ್ ಬೆಳ್ತಂಗಡಿ ಧನ್ಯವಾದವಿತ್ತರು.

Related posts

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

Suddi Udaya

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆ: ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ: ಎಸ್ ಎಸ್ ಎಲ್ ಸಿ ಸಾಧಕ ಚಿನ್ಮಯಿ ಜಿ.ಕೆ ರವರಿಂದ ಶೈಕ್ಷಣಿಕ ವರ್ಷಕ್ಕೆ ಚಾಲನೆ

Suddi Udaya

ಪಟ್ರಮೆ ಗ್ರಾಮದಲ್ಲಿ ಎಂಟು ತಿಂಗಳ ಹಿಂದೆ ವಿಷ ಸೇವಿಸಿ ಸಾವನ್ನಪ್ಪಿದ ರಕ್ಷಿತಾ ಮತ್ತು ಲಾವಣ್ಯ: ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ, ದಲಿತ ಹಕ್ಕುಗಳ ಹೋರಾಟ ಸಮಿತಿಯಿಂದ ಪೊಲೀಸರಿಗೆ ಮನವಿ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya
error: Content is protected !!