September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹ ಆಂ.ಮಾ. ಶಾಲಾ ಪ್ರಾರಂಭೋತ್ಸವ

ಉಜಿರೆ: 2025-26ನೇ ಸಾಲಿನ ಅನುಗ್ರಹ ಶಾಲಾ ಪ್ರಾರಂಭೋತ್ಸವವು ಶಾಲಾ ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಿತು.

ಸಭಾ ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ವಂ. ಫಾ. ಅಬೆಲ್ ಲೋಬೊ, ಪ್ರಾಂಶುಪಾಲ ವಂ ಫಾ ವಿಜಯ್ ಲೋಬೋ ಮಕ್ಕಳ ಜೊತೆಯಲ್ಲಿ ದೀಪ ಬೆಳಗಿಸಿ ಉದ್ಘಾಟಿಸುವ ಮೂಲಕ ಶಾಲಾ ಕಾರ್ಯ ಚಟುವಟಿಕೆಗಳಿಗೆ ಚಾಲನೆ ನೀಡಿದರು.

ಪ್ರಾಂಶುಪಾಲರು ಪ್ರಾಸ್ತಾವಿಕ ಮಾತನಾಡಿ ಶಾಲೆಯಲ್ಲಿ ಮಕ್ಕಳು ಪಾಲಿಸಲೇಬೇಕಾದ ನಿಯಮಗಳ ಬಗ್ಗೆ ತಿಳಿಸಿ ಹೇಳಿದರು. ನಂತರ ಹೊಸ ಶಿಕ್ಷಕ ಶಿಕ್ಷಕಿಯರನ್ನು ಹಾಗೂ ಶಾಲೆಯ ವಿವಿಧ ತರಗತಿಗಳಿಗೆ ಹೊಸದಾಗಿ ಸೇರ್ಪಡೆಗೊಂಡ ಮಕ್ಕಳನ್ನು ಸ್ವಾಗತಿಸಲಾಯಿತು.

ಸಂಚಾಲಕ ವಂ ಫಾ ಅಬೆಲ್ ಲೋಬೊ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಮೌಲ್ಯಾಧಾರಿತ ಹಾಗೂ ಶಿಸ್ತುಬದ್ಧ ಜೀವನವನ್ನು ಅಳವಡಿಸಿಕೊಳ್ಳಬೇಕೆಂದು ಮಕ್ಕಳಿಗೆ ಕಿವಿ ಮಾತು ಹೇಳುತ್ತಾ ಶಾಲಾ ಕಾರ್ಯ ಚಟುವಟಿಕೆಗಳಿಗೆ ಶುಭ ಕೋರಿದರು.

ಸಹಶಿಕ್ಷಕಯರಾದ ಶ್ರೀಮತಿ ಐರಿನ್ ರೋಡ್ರಿಗಸ್ ಕಾರ್ಯಕ್ರಮ ನಿರೂಪಿಸಿ, ರವಿಕುಮಾರ್ ಸ್ವಾಗತಿಸಿ, ಶ್ರೀಮತಿ ಅರ್ಪಿತ ವಂದಿಸಿದರು. ಮಕ್ಕಳಿಗೆ ಸಿಹಿ ಹಂಚಲಾಯಿತು

Related posts

ಶಿಬಾಜೆ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ಭಜನೋತ್ಸವ: ಶೌರ್ಯ ವಿಪತ್ತು ತಂಡದಿಂದ ಶ್ರಮದಾನ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆಂಪೇಗೌಡರ 517ನೇ ಜಯಂತಿ ಆಚರಣೆ

Suddi Udaya

ಉಜಿರೆ ಅನುಗ್ರಹ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ಸ್

Suddi Udaya

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಪಡಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಮತಯಾಚನೆ

Suddi Udaya

ನಡ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!