25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುದುವೆಟ್ಟು: ಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ

ಪುದುವೆಟ್ಟು: ಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುವಿನಲ್ಲಿ 2025-26 ನೇ ಶೈಕ್ಷಣಿಕ ವರ್ಷದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೀಡುವ ಉಚಿತ ಬರವಣಿಗೆ ಪುಸ್ತಕಗಳ ವಿತರಣಾ ಕಾರ್ಯಕ್ರಮ ಜೂ.3ರಂದು ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಬೀಡಿನ ಮ್ಯಾನೇಜರ್ ದೀಕ್ಷಿತ್ ಆಗಮಿಸಿ ವಿದ್ಯಾರ್ಥಿಗಳಿಗೆ ಬರವಣಿಗೆ ಪುಸ್ತಕಗಳನ್ನು ವಿತರಿಸಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಯುತ್ತಿರುವ ಸಾಮಾಜಿಕ ಚಟುವಟಿಕೆಗಳ ಬಗ್ಗೆ ವಿವರಿಸಿದರು. ಸಂಸ್ಥೆಯಿಂದ ದೊರೆಯುತ್ತಿರುವ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾ ಗಬೇಕೆಂದು ಕಿವಿಮಾತು ಹೇಳಿದರು.

ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಪುದುವೆಟ್ಟು ಗ್ರಾ.ಪಂ ಮಾಜಿ ಅಧ್ಯಕ್ಷ ಅಬ್ದುಲ್ ಗಫೂರ್ ರವರು ಪ್ರತೀ ವರ್ಷ ಶಾಲೆಯ ಶೈಕ್ಷಣಿಕ ಗುಣಮಟ್ಟದಲ್ಲಿ ಪ್ರಗತಿಯಾಗುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಇನ್ನೋರ್ವ ಮುಖ್ಯ ಅತಿಥಿ ಶಾಲಾ ಶಿಕ್ಷಕ ರಕ್ಷಕ ಸಂಘದ ಮಾಜಿ ಅಧ್ಯಕ್ಷ ರೋಯಿ ಜೋಸೆಫ್ ರವರು ಶಾಲೆಗೆ ಹಾಗೂ ಪುದುವೆಟ್ಟು ಗ್ರಾಮಕ್ಕೆ ಖಾವಂದರು ನೀಡಿರುವ ಕೊಡುಗೆಗಳನ್ನು ಸ್ಮರಿಸಿ ಶ್ರೀ ಕ್ಷೇತ್ರದಿಂದ ನಿರಂತರವಾಗಿ ನಡೆಯುತ್ತಿರುವ ಸಾಮಾಜಿಕ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಶಾಲಾ ಮುಖೋಪಾಧ್ಯಯ ಶೀನಪ್ಪ ಗೌಡ ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸಂಸ್ಥೆಯಿಂದ ದೊರೆಯುತ್ತಿರುವ ಸೌಲಭ್ಯಗಳ ಮತ್ತು ಪ್ರಸ್ತುತ ವರ್ಷದ ಶೈಕ್ಷಣಿಕ ಯೋಜನೆಗಳ ಬಗ್ಗೆ ವಿಸ್ತೃತವಾಗಿ ವಿವರಿಸಿ ಶೈಕ್ಷಣಿಕ ವರ್ಷದ ಯಶಸ್ವಿಗೆ ಎಲ್ಲರ ಸಹಕಾರವನ್ನು ಕೋರಿದರು.ಹಿರಿಯ ಶಿಕ್ಷಕಿ ಶ್ರೀಮತಿ ತೇಜಾವತಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.ಶ್ರೀಮತಿ ಪುಷ್ಪಲತಾರವರು ಸ್ವಾಗತಿಸಿದರು.

ಪವನ್ ಕುಮಾರ್ ಕುಮಾರ್ ಧನ್ಯವಾದ ಸಮರ್ಪಿಸಿದರು.ಶ್ರೀ ನಿಶಾಂತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶಿಕ್ಷಕ ವೃಂದ ಮತ್ತು ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ

Suddi Udaya

ಎಸ್.ಡಿ.ಎಂ. ವಸತಿ ಪ.ಪೂ. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಕವಿತಾ ಉಮೇಶ್ ರವರಿಗೆ ‘ಕನ್ನಡ ಸ್ವಾಭಿಮಾನ ಸ್ಮರಣಿಕೆಯ ಗೌರವ ಪ್ರಶಸ್ತಿ’

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಉದ್ಘಾಟನೆ

Suddi Udaya

ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವತಿಯಿಂದ 352 ನೇ ಆರಾಧನಾ ಮಹೋತ್ಸವ

Suddi Udaya
error: Content is protected !!