29.5 C
ಪುತ್ತೂರು, ಬೆಳ್ತಂಗಡಿ
June 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ನೇ ಶೈಕ್ಷಣಿಕ ವರ್ಷದ ಉದ್ಘಾಟನಾ ಸಮಾರಂಭವು ಜೂನ್ 3ರಂದು ಸೇಕ್ರೆಡ್ ಹಾರ್ಟ್ ಸಮುದಾಯ ಭವನದಲ್ಲಿ ನಡೆಯಿತು.

ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭವಾದ ಸಮಾರಂಭದಲ್ಲಿ ಶಾಲಾ ಸಂಚಾಲಕರು ಹಾಗೂ ಇತರ ಗಣ್ಯರು ದೀಪ ಬೆಳಗಿಸುವುದರ ಮೂಲಕ 2025-26ನೇ ಸಾಲಿನ ಶೈಕ್ಷಣಿಕ ವರ್ಷವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ಸಂಚಾಲಕರಾದ ವಂ|ಸ್ವಾ। ಸ್ಪ್ಯಾನಿ ಗೋವಿಯಸ್ ಇವರು ವಹಿಸಿದ್ದರು.

ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ನಾವು ಉತ್ಸಾಹದಿಂದ ನಮ್ಮ ಜೀವನವನ್ನು ಪ್ರಾರಂಭಿಸಿದಾಗ ನಾವು ಯಶಸ್ಸನ್ನು ಕಾಣುತ್ತೇವೆ ಎಂದು ಹೇಳಿ ಮಕ್ಕಳಿಗೆ ಶುಭ ಹಾರೈಸಿದರು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ| ಲಿಯೋ ನೊರೊನ್ಹ ಇವರು ಆಗಮಿಸಿದ್ದರು. ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ನಮ್ಮ ಜೀವನದಲ್ಲಿ ಒಂದು ಗುರಿ ಇರಬೇಕು ಆಗ ನಾವು ಯಶಸ್ಸನ್ನು ಕಾಣಬಹುದು ಎಂದು ಹೇಳಿ ಮಕ್ಕಳಿಗೆ ಶುಭ ಹಾರೈಸಿದರು.

2024-25ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕವನ್ನು ಗಳಿಸಿದ ಸ್ವರ್ಣ ಗೌರಿ ನಾಯಕ್‌, ಈಸ ಗಿಬ್ಬನ್ ತಾವೋ, ಪರ್ಲ್ ತಾವೋ, ಜೋಷ್ಮಾ ಜೋಯಿಸ್, ತೃಪ್ತಿ ಎಸ್‌.ಜೆ ಇವರನ್ನು ಅವರ ಹೆತ್ತವರೊಂದಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.ಶಾಲೆಗೆ ಹೊಸದಾಗಿ ನೇಮಕಗೊಂಡ ಶಿಕ್ಷಕ- ಶಿಕ್ಷಕಿಯರನ್ನು ಮತ್ತು ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಸಭೆಗೆ ಪರಿಚಯಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ|ದೀಪಕ್ ಲಿಯೊ ಡೇಸ ಇವರು ಎಲ್ಲ ವಿದ್ಯಾರ್ಥಿಗಳನ್ನು 2025-26ನೇ ಶೈಕ್ಷಣಿಕ ವರ್ಷಕ್ಕೆ ಸ್ವಾಗತಿಸಿ ಶುಭಹಾರೈಸಿದರು.

ಈ ಕಾರ್ಯಕ್ರಮದಲ್ಲಿ ಮಡಂತ್ಯಾರು ಚರ್ಚ್ ಸಹಾಯಕ ಧರ್ಮ ಗುರುಗಳಾದ ವಂ|ಸ್ವಾ| ಲ್ಯಾರಿ ಪಿಂಟೋ ರವರು, ಮಡಂತ್ಯಾರು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಜೆರಾಲ್ಡ್ ಮೊರಸ್ ರವರು,ಶಿಕ್ಷಕ- ರಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ವಿನಯ್ ಡಿಸೋಜ ರವರು,ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಶಿಕ್ಷಕರಾದ ಮಂಜುನಾಥ ರವರು ನಿರೂಪಿಸಿ, ಶ್ರೀಮತಿ ವಿನ್ನಿ ಲೋಬೋ ರವರು ಸ್ವಾಗತಿಸಿ, ಶ್ರೀಮತಿ ಐಡ ಡಿಕುನ್ಹಾ ರವರು ಧನ್ಯವಾದಗಳನ್ನು ಸಮರ್ಪಿಸಿದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಾಜ್ಞಾನ ಸಚಿವ ಎನ್.ಎಸ್. ಬೋಸರಾಜು ಭೇಟಿ: ಅಂರ್ತಜಲ ವೃದ್ಧಿ ನಮ್ಮೆಲ್ಲರ ಜವಾಬ್ದಾರಿ

Suddi Udaya

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

Suddi Udaya

ಸಾಮರಸ್ಯ ಸಾರಿದ ಮಂಗಳೂರು ದಸರಾ ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಹರ್ಷ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

Suddi Udaya

ಡಿ.17: ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ಜೂ.10: ಸುಲ್ಕೇರಿ ಶ್ರೀರಾಮ ವಿದ್ಯಾಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರ ಕುಟೀರದ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!