September 6, 2026
ಶಾಲಾ ಕಾಲೇಜು

ವಾಣಿ ಕಾಲೇಜು: ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಪ್ರಭೋಧ’ ಓರಿಯಂಟೇಶನ್ ಕಾರ್ಯಕ್ರಮ

*ವಾಣಿ ಕಾಲೇಜು: ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಪ್ರಭೋಧ’ ಓರಿಯಂಟೇಶನ್ ಕಾರ್ಯಕ್ರಮ
ಬೆಳ್ತಂಗಡಿ :ದೃಢ ಚಿತ್ತದಿಂದ ಉತ್ತಮ ವಿಚಾರಗಳನ್ನು ಅಳವಡಿಸಿಕೊಂಡು ಮಹತ್ವಪೂರ್ಣ ಸಾಧನೆಯನ್ನು ಮಾಡುವುದು ವಿದ್ಯಾರ್ಥಿಗಳ ಗುರಿಯಾಗಬೇಕು ಎಂದು ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಜಯಾನಂದ ಗೌಡ ಹೇಳಿದರು.


ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ‘ಪ್ರಬೋಧ’ ಓರಿಯಂಟೇಶನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಯೌವ್ವನದ ಹೊಸ್ತಿಲಲ್ಲಿ ಇರುವ ವಿದ್ಯಾರ್ಥಿಗಳು ಉತ್ಸಾಹದ ಭರದಲ್ಲಿ ತಪ್ಪು ನಿರ್ಧಾರಗಳನ್ನು ಮಾಡದೆ ಗುಣಾತ್ಮಕ ಚಿಂತನೆಗಳ ಮೂಲಕ ಯಶಸ್ಸನ್ನು ಗಳಿಸಬೇಕು. ಜೀವನದಲ್ಲಿ ಶಿಸ್ತು ಸ್ವಚ್ಛತೆಯನ್ನು ಹೊಂದಿರಬೇಕು ಎಂದರು.
ವಾಣಿ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಗಣೇಶ್ ಗೌಡ ಅಧ್ಯಕ್ಷತೆ ವಹಿಸಿದ್ದರು. ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ ಉಪಸಿತರಿದ್ದರು. ಮಂಗಳೂರು ರಿಫೈನರಿ ಪೆಟ್ರೋಕೆಮಿಕಲ್ ಲಿಮಿಟೆಡ್ ನ ತೆರಿಗೆ ವಿಭಾಗದ ಅಧಿಕಾರಿ ಸಿ ಎ ಸನತ್ ಕುಮಾರ್ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ನಡೆಸಿಕೊಟ್ಟರು.
ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುರೇಂದ್ರ ಧನ್ಯವಾದವಿತ್ತರು. ಉಪನ್ಯಾಸಕಿ ಶ್ರೀಮತಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.
ಉಪನ್ಯಾಸಕರಾದ ಸುಧೀರ್ ಕೆಎನ್ ಮತ್ತು ಶಂಕರ್ ರಾವ್ ವಿದ್ಯಾರ್ಥಿಗಳಿಗೆ ಕಾಲೇಜಿನ ನಿಯಮಾವಳಿಗಳನ್ನು ತಿಳಿಸಿಕೊಟ್ಟರು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಉಜಿರೆ : ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು, – ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿಧ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ: 593 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣ, ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆದುಕೊಂಡು ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಶೈಕ್ಷಣಿಕ ಪ್ರಗತಿ- ಮಿಂಚಿನ ಸಂಚಾರ ಇಲಾಖಾ ತಂಡ ಭೇಟಿ

Suddi Udaya

ಸಂತ ತೆರೇಸಾ ಸಂಯುಕ್ತ ಪ.ಪೂ. ಕಾಲೇಜಿನಲ್ಲಿ ಶಾಲಾ ಮಂತ್ರಿ ಮಂಡಲದ ಉದ್ಘಾಟನಾ ಸಮಾರಂಭ

Suddi Udaya
error: Content is protected !!