31.2 C
ಪುತ್ತೂರು, ಬೆಳ್ತಂಗಡಿ
September 30, 2026
ಶಾಲಾ ಕಾಲೇಜು

ಕಿರಿಯ ಪ್ರಾಥಮಿಕ ಶಾಲೆ ಕಾರಿಂಜ ಇಲ್ಲಿ ಶಾಲಾ ಪ್ರಾರಂಭೋತ್ಸವ

ಕಣಿಯೂರು: ಕಿರಿಯ ಪ್ರಾಥಮಿಕ ಶಾಲೆ ಕಾರಿಂಜ ಇಲ್ಲಿ ಶಾಲಾ ಪ್ರಾರಂಭೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು. ಶಾಲೆಗೆ ಸೇರ್ಪಡೆಕೊಂಡ ಮಕ್ಕಳನ್ನು ಮೆರವಣಿಗೆ ಮೂಲಕ ಬಲೂನ್ ಹಾಗೂ ಹೂ ಕೊಟ್ಟು ಸ್ವಾಗತಿಸಲಾಯಿತು.

ಇಲ್ಲಿನ ಮುಖ್ಯ ನಿವೃತ್ತ ಶಿಕ್ಷಕರಾದ ಧರ್ಣಪ್ಪ ನಾಯ್ಕ ಇವರು ಮಕ್ಕಳಿಗೆ ಶಿಕ್ಷಣದ ಪ್ರಗತಿಗೆ ಪೂರಕವಾಗಿ ತಾವು ಮಾಡಬೇಕಾದ ಕರ್ತವ್ಯದ ಬಗ್ಗೆ ಮಾಹಿತಿಯನ್ನು ನೀಡಿದರು. ನಿವೃತ್ತ ಸೈನಿಕರಾದ j.k ಪೂಜಾರಿಯವರು ಶಿಸ್ತಿನ ಅಗತ್ಯತೆಯ ಬಗ್ಗೆ ಮಾಹಿತಿ ನೀಡಿದರು ಇಲಾಖೆಯಿಂದ ಸರಬರಾಜುವಾದ ಪಠ್ಯಪುಸ್ತಕಗಳನ್ನು ವಿತರಣೆ ಮಾಡಲಾಯಿತು. ಮುಖ್ಯ ಶಿಕ್ಷಕಿ ಗಿರಿಜಾ ಎನ್ ಪ್ರಸ್ತಾವಿಕವಾಗಿ ಮಾತಾಡಿ ಸ್ವಾಗತಿಸಿದರು.SDMC ಅಧ್ಯಕ್ಷರಾದ ಜಗನ್ನಾಥ ರೈ ಅವರು ನೆರೆದಿರುವ ಎಲ್ಲರಿಗೂ ಧನ್ಯವಾದಗಳುನ್ನು ತಿಳಿಸಿದರು. ಸಹ ಶಿಕ್ಷಕ ಪರಮೇಶ್ವರ್ ಎಸ್ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಸ್ಥಳೀಯ ದಾನಿಗಳಾದ ಓಬಯ್ಯಪೂಜಾರಿ ,ದಾಸಪ್ಪ ಗೌಡ ,SDMC ಸದಸ್ಯರು , ಪೋಷಕರು, ಅಂಗನವಾಡಿ ಕಾರ್ಯಕರ್ತರು ಶಾಲಾ ಶಿಕ್ಷಕರು, ಮತ್ತು ಮಕ್ಕಳು ಭಾಗವಹಿಸಿದರು.

Related posts

ಕುತ್ಲೂರು ಸ.ಉ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ

Suddi Udaya

ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಶೇ. 100 ಫಲಿತಾಂಶ ದಾಖಲೆ

Suddi Udaya

ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ- ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಸಿ ಎಸ್ ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅದ್ವಿತೀಯ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya
error: Content is protected !!