September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2024-25 ಸಾಲಿನ ಅಂತಿಮ ವರ್ಷದ ಪರೀಕ್ಷೆ: ಉಜಿರೆ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇಕಡಾ 100 ಫಲಿತಾಂಶ

ಉಜಿರೆ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2024-25 ಸಾಲಿನ ಅಂತಿಮ ವರ್ಷದ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಎಲ್ಲಾ ಆರು ವಿಭಾಗಗಳೂ ಶೇಕಡಾ 100 ಫಲಿತಾಂಶ ಪಡೆದುಕೊಂಡಿವೆ.

ಒಟ್ಟು 407 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 406 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು ಒರ್ವ ವಿದ್ಯಾರ್ಥಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಕಳೆದ ಮೂರು ವರ್ಷಗಳಿಂದಲೂ ಸತತವಾಗಿ ಶೇಕಡಾ 100 ಫಲಿತಾಂಶ ದಾಖಲಾಗುತ್ತಿದ್ದು ಈ ಸಾಧನೆಗಾಗಿ ವಿದ್ಯಾರ್ಥಿ ಮತ್ತು ಪ್ರಾದ್ಯಾಪಕ ವೃಂದವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಹಾಗೂ ಡಾ. ಸತೀಶ್ಚಂದ್ರರವರು ಅಭಿನಂದಿಸಿದ್ದಾರೆ ಎಂದು ಪ್ರಾಂಶುಪಾಲರಾದ ಡಾ. ಅಶೋಕ್‌ ಕುಮಾರ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಪಟ್ರಮೆ ಸಂಕೇಶದಲ್ಲಿ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ತಯಾರಿಕಾ ಅಡ್ಡೆ- ಅಬಕಾರಿ ಇಲಾಖೆಯಿಂದ ದಾಳಿ ಆರೋಪಿ ಪರಾರಿ ಸೊತ್ತುಗಳು ವಶ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 2644 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಮುಂಡೂರು ನಾಗಕಲ್ಲುರ್ಟಿ ಕ್ಷೇತ್ರದಲ್ಲಿ ಕುಣಿತ ಭಜನೋತ್ಸವ

Suddi Udaya

ನೈಮಿಷರವರ ಕೋಕೋ ಡ್ಯೂ ಶುದ್ದ ಗಾಣದ ಕೊಬ್ಬರಿ ಎಣ್ಣೆ ಬಿಡುಗಡೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya
error: Content is protected !!