March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ದ್ವೇಷ ಭಾಷಣ ಆರೋಪ- ವಿ.ಹಿಂ.ಪ. ನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಜೂ.4ರಂದು ಕಡಬ ಪೊಲೀಸ್ ಠಾಣೆಯ ಮುಂಭಾಗದ ರಸ್ತೆಯಲ್ಲಿ ನಡೆದ ಹಿಂದೂ ಕಾರ್ಯಕರ್ತರ ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಮಾಡಿದ್ದಾರೆ ಎಂಬ ಆರೋಪದಲ್ಲಿ ವಿ.ಹಿಂ.ಪ. ಜಿಲ್ಲಾ ಕಾರ್ಯದರ್ಶಿ ಬೆಳ್ತಂಗಡಿ ತಾಲೂಕು ನೆರಿಯ ಗ್ರಾಮದ ನವೀನ್ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂದು ಸಂಜೆ ಧಾರ್ಮಿಕ ಸಂಘಟನೆಗಳ ಪ್ರಮುಖರುಗಳು ಕಡಬ ಪೊಲೀಸ್ ಠಾಣೆಯ ಬಳಿ ರಸ್ತೆಯಲ್ಲಿ ನಿಂತು ನವೀನ್ ನೆರಿಯ ಪೊಲೀಸರನ್ನು ಉದ್ದೇಶಿಸಿ ದ್ವೇಷದ ಭಾಷಣವನ್ನು ಮಾಡಿರುವುದಲ್ಲದೇ, ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರಿಗೆ ಕೋಮುದ್ವೇಷ ಭಾವನೆ ಹುಟ್ಟುವಂತೆ ಮಾತನಾಡಿರುತ್ತಾರೆ.

ಇದರಿಂದಾಗಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿದೆ ಎಂದು ಕಡಬ ಪೊಲೀಸ್‌‌ ಠಾಣಾ ಅ.ಕ್ರ 42/2025 ಕಲಂ: 353(2)BNS-2023 ರಂತೆ ಪ್ರಕರಣ ದಾಖಲಿಸಲಾಗಿದೆ.
ಘಟನೆಯ ಬಗ್ಗೆ ಠಾಣಾ ಎಸ್.ಐ. ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ; ರೂ.4.81 ಕೋಟಿ ಲಾಭ, ಸದಸ್ಯರಿಗೆ ಶೇ. 18 ಡಿವಿಡೆಂಟ್

Suddi Udaya

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಬೆಳ್ತಂಗಡಿ ಮಂಡಲದ ವತಿಯಿಂದ ವಿಜಯೋತ್ಸವ: ಸಂಸದ ಕ್ಯಾ| ಬ್ರಿಜೇಶ್ ಚೌಟ ಭಾಗಿ

Suddi Udaya

ಮಲೆಬೆಟ್ಟು ಹಾ.ಉ.ಸಂ. ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ ಸೆಂಟರ್‌ನಲ್ಲಿ ಮನ್ಸೂನ್ ಆಫರ್; ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ಆಟಿದ ಗಮ್ಮತ್

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya
error: Content is protected !!