September 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ನಡ: ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್‌ನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಮಂಜೊಟ್ಟಿ ಹೋಲಿ ಕ್ರಾಸ್ ಚರ್ಚ್‌ನ ಧರ್ಮಗುರು ರೆ. ಫಾದರ್ ಸೆಬಾಸ್ಟಿನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ “ಪರಿಸರವನ್ನು ನಾವು ಮೊದಲು ಪ್ರೀತಿಸಬೇಕು. ಪರಿಸರವಿದ್ದರೆ ಶುಚಿಯಾಗಿದ್ದರೆ ಮಾತ್ರ ನಮ್ಮ ಬದುಕು ಸುಂದರ. ನಮ್ಮ ಭವಿಷ್ಯದ ಏಳಿಗೆಗಾಗಿ ಮತ್ತು ನಮ್ಮ ಉಳಿವಿಗಾಗಿ ನಾವು ಪರಿಸರವನ್ನು ಪ್ರೀತಿಸಬೇಕು” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್ ಸಾಹೇಬ್ ವಹಿಸಿದ್ದರು.
ವೇದಿಕೆಯಲ್ಲಿ ಶಾಲಾ ಆಡಳಿತ ಟ್ರಸ್ಟಿನ ಕಾರ್ಯದರ್ಶಿ ಸಯ್ಯದ್ ಮಹಮ್ಮದ್ ಅಯ್ಯುಬ್ ಹಾಗೂ ಅರಬಿಕ್ ಶಿಕ್ಷಣದ ಮುಖ್ಯೋಪಾಧ್ಯಾಯ ಶರೀಫ್ ಸಖಾಫಿ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿ ಪ್ರಾಸ್ತಾವಿಸಿ ಸ್ವಾಗತಿಸಿದರು. ವಿದ್ಯಾರ್ಥಿ ಮಹಮ್ಮದ್ ಶಮ್ಮಾಸ್ ಕಾರ್ಯಕ್ರಮವನ್ನು ನಿರೂಪಿಸಿದರು.

ಶಾಲಾ ವಿದ್ಯಾರ್ಥಿಗಳು ಪರಿಸರ ಪ್ರೇಮವನ್ನು ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.
ಕಾರ್ಯಕ್ರಮದ ಬಳಿಕ ಅತಿಥಿಗಳು ಹಾಗೂ ವಿದ್ಯಾರ್ಥಿಗಳು ಸಸಿಯನ್ನು ನೆಡುವುದರ ಮೂಲಕ ಅದರ ಪೋಷಣೆಯನ್ನು ಮಾಡುವರೇ ಪ್ರತಿಜ್ಞೆಯನ್ನು ಕೈಗೊಳ್ಳಲಾಯಿತು.

Related posts

ಜಮಲಾಬಾದ್ (ಗಡಾಯಿ ಕಲ್ಲು) ಕೋಟೆಗೆ ರೋಪ್‌ವೇ ನಿರ್ಮಾಣಕ್ಕೆ ಯು.ಟಿ. ಖಾದರ್ ಅವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ರಾಜ್ಯದಲ್ಲಿ ಸಿವಿಲ್ ಸರ್ವಿಸ್ ಬೋರ್ಡ್ ರಚನೆಯ ಕುರಿತು ಸದನದಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ನಾಳೆ (ಜು.28) ಕುಲಾಲ ಮಂದಿರದಲ್ಲಿನೂತನ ಸಂಸದ ಕ್ಯಾ| ಬೃಜೇಶ್ ಚೌಟರಿಗೆ ಅಭಿನಂದನೆ – ವಿದ್ಯಾರ್ಥಿ ವೇತನ ವಿತರಣೆ – ಆಟಿ ಕೂಟ ಕಾಯ೯ಕ್ರಮ

Suddi Udaya

ನಿಡ್ಲೆ ಸರಕಾರಿ ಪ್ರೌಢಶಾಲೆಗೆ 1990ರ ಎಸ್ ಎಸ್ ಎಲ್ ಸಿ ಬ್ಯಾಚಿನ ಹಳೆ ವಿದ್ಯಾರ್ಥಿಗಳಿಂದ ದೇಣಿಗೆ ಹಸ್ತಾಂತರ

Suddi Udaya

ಅಳದಂಗಡಿ: ಆಟೋ ರಿಕ್ಷಾ ಮತ್ತು ಬೈಕ್ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗುರುವಾಯನಕೆರೆ: ಕಬ್ಬಿನ ಹಿತ್ತಿಲು ನಿವಾಸಿ ಕಮಲ ನಾಯ್ಕ್ ನಿಧನ

Suddi Udaya
error: Content is protected !!