September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಡಂತ್ಯಾರು: ಪೆದ್ಯಾರ್ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾರ್ಯ: ಸುದ್ದಿ ಉದಯ ಜನಧ್ವನಿ Effect

ಮಡಂತ್ಯಾರು: ಮಡಂತ್ಯಾರಿನಿಂದ ಪಾಂಡವರಕಲ್ಲು ರಸ್ತೆಯ ಪೆದ್ಯಾರ್ ಪ್ರದೇಶದಲ್ಲಿ ಗುಂಡಿಗಳು ಸೃಷ್ಟಿಯಾಗಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದ್ದು ಇದೀಗ ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಲಾಗುತ್ತಿದೆ. ರಸ್ತೆಯಲ್ಲಿ ಭಾರಿ ಪ್ರಮಾಣದಲ್ಲಿ ಗುಂಡಿಗಳು ನಿರ್ಮಾಣವಾಗಿವೆ. ನಿತ್ಯ ನೂರಾರು ವಾಹನಗಳು ಸಂಚರಿಸುವ ಪ್ರಮುಖ ಮಾರ್ಗದಲ್ಲಿ ಬೃಹದಾಕಾರದ ಗುಂಡಿಗಳು ನಿರ್ಮಾಣವಾಗಿರುವುದರಿಂದ ಜನ ಸಂಕಷ್ಟಕ್ಕೆ ಸಿಲುಕುವಂತಾಗಿತ್ತು ಈ ಬಗ್ಗೆ ಸುದ್ದಿ ಉದಯ ವಾರ ಪತ್ರಿಕೆ ಜನಧ್ವನಿ ಮೂಲಕ ವರದಿ ಪ್ರಕಟಿಸಿತ್ತು. ಗುಂಡಿಗಳನ್ನು ಜಲ್ಲಿಕಲ್ಲು ಹಾಕಿ ತಾತ್ಕಾಲಿಕವಾಗಿ ಮುಚ್ಚಲಾಗುತ್ತಿದ್ದು ಜೊತೆಗೆ ಚರಂಡಿ ದುರಸ್ತಿ ಕಾರ್ಯ ನಡೆಯುತ್ತಿದೆ. ಕೇವಲ ನೂರು ಮೀಟರ್ ಉದ್ದದ ರಸ್ತೆಯಲ್ಲಿ ಅಲ್ಲಲ್ಲಿ ಗುಂಡಿಗಳು ಕಾಣಿಸಿಕೊಂಡಿದೆ. ತಾತ್ಕಾಲಿಕ ವ್ಯವಸ್ಥೆಯ ಬದಲಾಗಿ ಮರು ಡಾಮರೀಕರಣ ಮಾಡಿದ್ದಲ್ಲಿ ಮಳೆಗಾಲದಲ್ಲಿ ಯಾವುದೇ ಸಮಸ್ಯೆ ಉಂಟಾಗಲು ಸಾಧ್ಯವಿಲ್ಲ ಎಂಬುದು ಸಾರ್ವಜನಿಕರು ಮಾತು.

Related posts

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ಗೆ ಆಯ್ಕೆ

Suddi Udaya

ಪಣಕಜೆ ಬಳಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಆಹಾರ ಇಲಾಖೆ ಆದೇಶ: ಬೆಳಗ್ಗೆ 6ರಿಂದ ರಾತ್ರಿ 10 ರವರೆಗೆ ಪಡಿತರ ವಿತರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬೈಪಾಡಿ ಕಾರ್ಯಕ್ಷೇತ್ರದ ‘ಶ್ರೀರಾಮ’ ನೂತನ ಸಂಘದ ಉದ್ಘಾಟನೆ

Suddi Udaya

ಉರುವಾಲು:32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸಭೆ

Suddi Udaya
error: Content is protected !!