September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಪೊಲೀಸ್ಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿ, ಮನೋಜ್ ಕುಮಾರ್ ಗಡಿಪಾರು ಪ್ರಕ್ರಿಯೆ ವಿರೋಧಿಸಿ ಖಂಡನಾ ಸಭೆ-ಹೋರಾಟಕ್ಕೆ ನಿರ್ಧಾರ

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಮನೋಜ್ ಕುಮಾರ್ ಅವರನ್ನು ಗಡಿಪಾರು ನಡೆಸಲು ನಿರ್ಧರಿಸಿರುವುದನ್ನು ವಿರೋಧಿಸಿ ಕುಂಜರ್ಪದಲ್ಲಿ ಜೂ.3ರಂದು ಸಂಜೆ ಖಂಡನಾ ಸಭೆ ನಡೆಸಲಾಯಿತು. ಮಹೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಹೋರಾಟ ನಡೆಸಲು ನಿರ್ಧರಿಸಲಾಯಿತು.

ತಿಮರೋಡಿಯವರು ಪ್ರಸ್ತುತ ಯಾವುದೇ ಕೋಮು ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ. ಅವರು ಸಾಮಾಜಿಕ ಹೋರಾಟದಲ್ಲಿ ಮಾತ್ರ ಭಾಗವಹಿಸುತ್ತಿದ್ದಾರೆ. ಆದರೂ ಅವರನ್ನು ಗಡಿಪಾರು ಮಾಡಲು ಸಿದ್ಧತೆ ಮಾಡಲಾಗಿದೆ ಎಂದು ಸಭೆಯಲ್ಲಿ ಆಕ್ರೋಶ ವ್ಯಕ್ತವಾಯಿತಲ್ಲದೆ ಈ ಬಗ್ಗೆ ಸಾರ್ವಜನಿಕವಾಗಿ ಬೃಹತ್ ಹೋರಾಟ ನಡೆಸಲು ನಿರ್ಧರಿಸಲಾಯಿತು.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕರೂ ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥರೂ ಆಗಿರುವ ಮಹೇಶ್ ಶೆಟ್ಟಿ ತಿಮರೋಡಿ, ರಾಷ್ಟ್ರೀಯ ಹಿಂದು ಜಾಗರಣ ವೇದಿಕೆಯಲ್ಲಿ ಸಕ್ರಿಯವಾಗಿರುವ ಉಜಿರೆ ಕುಂಜರ್ಪದ ಮನೋಜ್ ಕುಮಾರ್ ಸಹಿತ 36 ಮಂದಿಯನ್ನು ದ.ಕ. ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಿಂದ ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು, ಅಧ್ಯಕ್ಷ ಅನಿಲ್ ಕುಮಾರ್ ಅಂತರ, ಸಂಚಾಲಕ ಮನೋಜ್ ಕುಂಜರ್ಪ, ಕಾರ್ಯದರ್ಶಿ ಸಂದೀಪ್ ಶೆಟ್ಟಿ ಮಂದರ್ಸ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

Related posts

ಎ.17: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಎಸ್‌ಡಿಪಿಐ ಅಭ್ಯರ್ಥಿಗಳಿಂದ ನಾಮಪತ್ರ : ‌ಬೆಳ್ತಂಗಡಿ ನಗರದಲ್ಲಿ ಸಂಚಾರಕ್ಕೆ ಅಡಚಣೆ ಹಿನ್ನಲೆಯಲ್ಲಿ ರಸ್ತೆ ಸಂಚಾರದಲ್ಲಿ ಬದಲಾವಣೆ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಧಮ೯ಸ್ಥಳದ ದಿಲೀಫ್ ರವರ ಶವ ಪತ್ತೆ ಪ್ರಕರಣ : ಅಪಘಾತ ಎಸಗಿದ ತರಕಾರಿ ಸಾಗಾಟದ ಪಿಕಫ್ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸರು

Suddi Udaya

ವಾಣಿ ಕಾಲೇಜು: ರೋವರ್‍ಸ್-ರೇಂಜರ್‍ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಕಾಂಗ್ರೆಸ್ ಪಕ್ಷದಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜ್ಯಾರಿಗಾಗಿ ಬ್ಲಾಕ್, ಗ್ರಾಮ ಮಟ್ಟದಲ್ಲಿ ತರಬೇತಿ: ಇಂದಿರಾ ಸೇವಾ ಸೆಂಟರ್ ಗಳನ್ನು ತೆರೆದು ಫಲಾನುಭವಿಗಳಿಗೆ ಅರ್ಜಿ ನೊಂದಣಿ

Suddi Udaya

ವೇಣೂರು ಎಕ್ಸೆಲ್ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಕ್ರೀಡಾಕೂಟ-ಕ್ರೀಡೆ ದೈಹಿಕ–ಮಾನಸಿಕ ಕ್ಷಮತೆ ಹೆಚ್ಚಿಸುತ್ತದೆ: ಸುಮಂತ್ ಕುಮಾರ್ ಜೈನ್

Suddi Udaya
error: Content is protected !!