September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆರ್‌ಸಿಬಿ ಸಂಭ್ರಮಾಚರಣೆ: ಇಳಂತಿಲ ಮೂಲದ ಯುವತಿ ಮೃತ್ಯು

ಉಪ್ಪಿನಂಗಡಿ:18 ವರ್ಷಗಳ ನಂತರ ಚೊಚ್ಚಲ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದು ಉಪ್ಪಿನಂಗಡಿ ಇಳಂತಿಲ ಮೂಲದ ಓರ್ವ ಯುವತಿಯೂ ಸೇರಿದ್ದಾರೆ ಎಂದು ತಿಳಿದು ಬಂದಿದೆ.

ಉದ್ಯಮಿಯಾಗಿರುವ ಇಳಂತಿಲ ಮೂಲದ ಕರುಣಾಕರ ಶೆಟ್ಟಿ ಮತ್ತು ಪೂಜಾ ಶೆಟ್ಟಿಯವರ ಪುತ್ರಿ ಚಿನ್ನಯಿ ಶೆಟ್ಟಿ(20) ಕಾಲ್ತುಳಿತದಿಂದ ಸಾವಿಗೀಡಾಗಿದವರು ಎಂದು ತಿಳಿದು ಬಂದಿದೆ.

18 ವರ್ಷದ ಕಾಯುವಿಕೆಯ ನಂತರ ಐಪಿಎಲ್‌ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಬೆಂಗಳೂರಿನಲ್ಲಿ ಅಭಿಮಾನಿಗಳು ಬರಮಾಡಿಕೊಂಡಾಗ, ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ ಹಿನ್ನೆಲೆಯಲ್ಲಿ ನೂಕುನುಗ್ಗಲು ಹಾಗೂ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿ, 33 ಮಂದಿ ಗಾಯಗೊಂಡಿದ್ದರು.

ಕಾಲ್ತುಳಿತದಲ್ಲಿ ಗಂಭೀರ ಗಾಯಗೊಂಡಿದ್ದ ಚಿನ್ಮಯಿ ಶೆಟ್ಟಿಯವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಸಾವನಪ್ಪಿದ್ದಾರೆ.

ಬೆಂಗಳೂರಿನ ಕನಕಪುರ ರಸ್ತೆಯ ಜ್ಯೋತಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎರಡನೇ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದ ಚಿನ್ಮಯಿ ಶೆಟ್ಟಿ ಅವರು ಅತ್ಯುತ್ತಮ ಯಕ್ಷಗಾನ ಕಲಾವಿದೆಯೂ ಆಗಿದ್ದರು.

ಇವರು ಬೆಂಗಳೂರಿನ ಯಕ್ಷತರಂಗ ತಂಡದ ವಿದ್ಯಾರ್ಥಿನಿಯಾಗಿದ್ದರು. ಚಿನ್ಮಯಿ ಶೆಟ್ಟಿಯವರ ತಂದೆ ಕರುಣಾಕರ ಶೆಟ್ಟಿಯವರು ಮೂಲತ: ಸೋಮವಾರಪೇಟೆ ನಿವಾಸಿಯಾಗಿದ್ದು ಕೆಲವರ್ಷಗಳ ಹಿಂದೆ ಇಳಂತಿಲದಲ್ಲಿ ಜಾಗ ಖರೀದಿಸಿ ಮನೆ ಮಾಡಿದ್ದರು.

ಬೆಂಗಳೂರುನಲ್ಲಿ ಉದ್ಯಮಿಯಾಗಿರುವ ಕರುಣಾಕರ ಶೆಟ್ಟಿಯವರು ಕುಟುಂಬದೊಂದಿಗೆ ಬೆಂಗಳೂರುನಲ್ಲಿಯೇ ವಾಸ್ತವ್ಯವಿದ್ದು ಅಂಡೆತ್ತಡ್ಕದಲ್ಲಿ ಅವರ ತಾಯಿ ಮತ್ತು ಮಗಳ ಮಗ ವಾಸ್ತವ್ಯವಿದ್ದಾರೆ.

ವಿಷಯ ತಿಳಿದು ಅವರು ಬೆಂಗಳೂರುಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

Related posts

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿ.ಎಂ ನಿರ್ಧಾರ

Suddi Udaya

ಆಮಂತ್ರಣ ದಶಮಾನೋತ್ಸವ ಸಮಿತಿ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ

Suddi Udaya

ಲಾಯಿಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯದಲ್ಲಿ ನವರಾತ್ರಿ ಉತ್ಸವ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ನಾವೂರು ಬಡೆಕಾವಿನಲ್ಲಿ ಭಕ್ತರ ಪರಿಶ್ರಮದಿಂದಲೇ ನಿರ್ಮಾಣ ಆಗುತ್ತಿರುವ ಶ್ರೀ ದುರ್ಗಾದೇವಿಯ ದೇವಸ್ಥಾನ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!