23.5 C
ಪುತ್ತೂರು, ಬೆಳ್ತಂಗಡಿ
March 7, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಜೂ.೫ರಂದು ಚಾಲನೆಯನ್ನು ನೀಡಲಾಯಿತು. ಸಭಾ ಕಾರ್ಯಕ್ರಮವು ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿ ಉಜಿರೆ ರತ್ನಮಾನಸ ನಿಲಯದ ಪಾಲಕ ಯತೀಶ್ ಕೆ. ಬಳೆಂಜ ಮಾತನಾಡಿ ಮನುಷ್ಯರು ಪರಿಸರವನ್ನು ಕಲುಷಿತ ಮಾಡಿ ಪರಿಸರ ಮಾಲಿನ್ಯವನ್ನು ಮಾಡುತ್ತಿದ್ದಾರೆ. ಪ್ರಜ್ಞಾವಂತ ನಾಗರೀಕರಾದ ನಾವು ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಚವಾಗಿ ಇಟ್ಟುಕೊಳ್ಳಬೇಕು. ಆಗ ನಮಗೆ ಸ್ವಚ್ಚ ನೀರು, ಗಾಳಿ, ಆಹಾರ ಸಿಗುತ್ತದೆ. ವಿದ್ಯಾವಂತರಾದ ವಿದ್ಯಾರ್ಥಿಗಳು ಪರಿಸರವನ್ನು ಉಳಿಸಿ ಬೆಳಸಿ ಸಸ್ಯಶ್ಯಾಮಲೆಯಾಗಿ ಭಾರತಾಂಬೆಯು ಕಂಗೊಳಿಸುವಂತೆ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮಕ್ಕಳಿಗೆ ಉಚಿತ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ಕಮಲ್‌ತೇಜು ರಜಪೂತ್, ಸ್ಥಳೀಯ ಗ್ರಾಮ ಪಂಚಾಯತ್‌ನ ಗ್ರಂಥಾಲಯ ಪಾಲಕಿ ಶ್ರೀಮತಿ ಮಂಜುಳಾ, ಹಿರಿಯ ಶಿಕ್ಷಕಿ ಶ್ರೀಜಾ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಿಕ್ಷಕಿ ಸೀಮಾ ಎಸ್.ಎಂ. ಕಾರ್ಯಕ್ರಮ ನಿರ್ವಹಿಸಿದರು. ಶ್ರೀಜಾ ಸ್ವಾಗತಿಸಿ, ಶಿಕ್ಷಕಿ ಸುಮಾ ವಂದಿಸಿದರು.

Related posts

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಇಳಂತಿಲ ಗ್ರಾ.ಪಂ.ಅಧ್ಯಕ್ಷರಾಗಿ ವಸಂತ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya

ಸುಳ್ಯ ,ಕಡಬ, ಪುತ್ತೂರು ತಾಲೂಕಿನಲ್ಲಿ ಶೂನ್ಯ ಬಂಡವಾಳದಲ್ಲಿ ಉದ್ಯಮ ನಡೆಸಲು ಚಿಂತನೆ” ಮೋಹನ್ ಗೌಡ. ಬಿ. ಎ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಸಹಾಯ ಧನ

Suddi Udaya
error: Content is protected !!