September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.೫ರಂದು ವಿಶ್ವ ಪರಿಸರ ದಿನಾಚರಣೆಯನ್ನು ಶಾಲಾ ಸಭಾಂಗಣದಲ್ಲಿ ಆಚರಿಸಲಾಯಿತು.

ವಿದ್ಯಾರ್ಥಿಗಳಾದ ಅನ್ವಿಲ್ ಡೇಸ ಮತ್ತು ಮೆಲೀಶಾ ಡಿಸೋಜಾ ವಿಶ್ವ ಪರಿಸರ ದಿನದ ಮಹತ್ವವನ್ನು ವಿವರಿಸಿದರು.

ವಿದ್ಯಾರ್ಥಿಗಳು ಹಾಡು, ನೃತ್ಯ ಮತ್ತು ಕಿರುನಾಟಕವನ್ನು ಅಭಿನಯಿಸುವುದರ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಿದರು. ಪರಿಸರ ಸಂರಕ್ಷಣೆಗೆ ಸಂಬಂಧಪಟ್ಟ ಹಲವು ಘೋಷಣೆಗಳನ್ನು ಕೂಗಿ ಪರಿಸರದ ಮಹತ್ವವನ್ನು ಬಿತ್ತರಿಸಲಾಯಿತು.

ಮುಖ್ಯ ಅತಿಥಿ ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಾಂಶುಪಾಲ ಪ್ರೊ| ಅಲೆಕ್ಸ್ ಐವನ್ ಸಿಕ್ವೇರಾ ಮಾತನಾಡಿ ನಾವು ಪರಿಸರವನ್ನು ಸಂರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ ಎಂದು ಹೇಳಿ ವಿಶ್ವ ಪರಿಸರ ದಿನದ ಶುಭಾಶಯವನ್ನು ಕೋರಿದರು.

ಪುಂಜಾಲಕಟ್ಟೆ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಚೇತನಾ ಮಾತನಾಡಿ ನಾವು ಇವತ್ತು ಮಾಡುವ ಪರಿಸರ ದಿನ ಆಚರಣೆ ಒಂದು ದಿನದ ಆಚರಣೆ ಆಗಬಾರದು ಇದನ್ನು ನಾವು ನಮ್ಮ ಬದುಕಿನಲ್ಲಿ ಪಾಲಿಸಬೇಕೆಂದು ಹೇಳಿ ವಿಶ್ವ ಪರಿಸರ ದಿನದ ಶುಭಾಶಯವನ್ನು ಕೋರಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ವಂ|ಸ್ವಾ| ದೀಪಕ್ ಲಿಯೊ ಡೇಸ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಪ್ರಿನ್ಸಿಯ ಕಾರ್ಲ್ ನಿರೂಪಿಸಿ, ವಿಶ್ಮಿತಾ ಪ್ರಭು ಸ್ವಾಗತಿಸಿ, ಪವನ್ ನಾಯಕ್ ವಂದಿಸಿದರು.

Related posts

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿಗೆ ಬೆಸ್ಟ್ ಆ್ಯಂಡ್ ಮೋಸ್ಟ್ ಟ್ರಸ್ಟೆಡ್ ಡಿಗ್ರಿ ಕಾಲೇಜ್ ಆಫ್ ಕರ್ನಾಟಕ ಪ್ರಶಸ್ತಿ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗನ ಸಂಚಾರ

Suddi Udaya

ಕಳೆಂಜ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯಾಗಿ ಅಂಬರೀಶ್ ಅಧಿಕಾರ ಸ್ವೀಕಾರ

Suddi Udaya
error: Content is protected !!