September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ನಾರಾವಿಯ ಮಹಿಳೆ ಮೃತ್ಯು

ನಾರಾವಿ: ಹೆರಿಗೆಯ ನಂತರ ಉಂಟಾದ ತೀವ್ರ ರಕ್ತಸ್ರಾವದಿಂದ ಅಸ್ವಸ್ಥಗೊಂಡ ನಾರಾವಿಯ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದಾರುಣ ಘಟನೆ ಜೂ.೪ರಂದು ವರದಿಯಾಗಿದೆ.

ನಾರಾವಿ ಗ್ರಾಮದ ನೂಜೋಡಿ ಮಾಪಾಲ ಮನೆ ನಿವಾಸಿ ಶೇಖರ ಮಲೆಕುಡಿಯ ಎಂಬವರ ಪತ್ನಿ ಶ್ರೀಮತಿ ಮಧುರಾ (29ವ) ಮೃತಪಟ್ಟ ಮಹಿಳೆಯಾಗಿದ್ದಾರೆ. ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಕೊಯನಾಡು ಬಾಬು ಮಲೆಕುಡಿಯ ಮತ್ತು ಚಿನ್ನಮ್ಮ ದಂಪತಿ ಪುತ್ರಿ ಶ್ರೀಮತಿ ಮಧುರಾ ಅವರನ್ನು ಕಳೆದ ಆರು ವರ್ಷಗಳ ಹಿಂದೆ ನಾರಾವಿ ಗ್ರಾಮದ ನೂಜೋಡಿ ಮನೆ ನಿವಾಸಿ ಶೇಖರ ಮಲೆಕುಡಿಯ ಅವರು ವಿವಾಹವಾಗಿದ್ದು, ಅವರಿಗೆ ಮೂರುವರೆ ವರ್ಷದ ಗಂಡು ಮಗುವಿದೆ. ಮಧುರಾ ಅವರು ಮತ್ತೆ ಗರ್ಭವತಿಯಾಗಿ ಸಂಪಾಜೆಯ ತಾಯಿ ಮನೆಗೆ ತೆರಳಿದ್ದರು. ಹೆರಿಗೆಗಾಗಿ ಜೂ.2ರಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಜೂ.೩ರಂದು ಸಂಜೆ 6.45ಕ್ಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ ರಾತ್ರಿ ೯ ಗಂಟೆಗೆ ತಾಯಿಗೆ ತೀವ್ರ ರಕ್ತಸ್ರಾವ ಉಂಟಾಗುತ್ತಿದೆ ಎಂದು ಅಲ್ಲಿಯ ವೈದ್ಯರು ತಿಳಿಸಿದ್ದಂತೆ, ಅಂಬ್ಯುಲೆನ್ಸ್‌ನಲ್ಲಿ ಮಧುರಾ ಅವರನ್ನು ಮಂಗಳೂರಿನ ಸರಕಾರಿ ಆಸ್ಪತ್ರೆಗೆ ರಾತ್ರಿ 11.30ಕ್ಕೆ ಕರೆತಂದು ದಾಖಲಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ರಾತ್ರಿ 12.37ಕ್ಕೆ ಆಸ್ಪತ್ರೆಯಲ್ಲಿ ಮೃತಪಟ್ಟರೆನ್ನಲಾಗಿದೆ.

ಮೃತದೇಹದ ಮರಣೋತ್ತರ ಪರೀಕ್ಷೆ: ಮಂಗಳೂರು ಆಸ್ಪತ್ರೆಯಲ್ಲಿ ಮಧುರಾ ಅವರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿತ್ತು. ಮನೆಯವರು ಅಂಬ್ಯುಲೆನ್ಸ್‌ನಲ್ಲಿ ಶವವನ್ನು ನಾರಾವಿಯ ಪತಿಯ ಮನೆಗೆ ತಂದಿದ್ದರು. ಶವದ ಅಂತಿಮ ಸಂಸ್ಕಾರಕ್ಕೆ ತಯಾರಿಯನ್ನು ನಡೆಸಲಾಗಿತ್ತು. ಈ ನಡುವೆ ಮರಣೋತ್ತರ ಪರೀಕ್ಷೆ ನಡೆಸದೆ ಶವವನ್ನು ಮನೆಯವರಿಗೆ ಹಸ್ತಾಂತರಿಸಿದ ಬಗ್ಗೆ ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷ ಶ್ರೀಧರ ಗೌಡ ಈದು ಮತ್ತಿತ್ತರ ನಾಯಕರು ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಈ ಹಿನ್ನಲೆಯಲ್ಲಿ ಮೃತ ಮಧುರಾ ಅವರ ಕುಟುಂಬಸ್ಥರು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿ, ಶವದ ಮರಣೋತ್ತರ ಪರೀಕ್ಷೆ ನಡೆಸದೆ ಮೃತ ದೇಹವನ್ನು ತುರ್ತಾಗಿ ಬಿಡುಗಡೆ ಮಾಡಲಾಗಿದೆ. ಮಧುರಾ ಅವರ ಸಾವಿಗೆ ವೈದ್ಯಾಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿ, ಶವದ ಮರಣೋತ್ತರ ಪರೀಕ್ಷೆ ನಡೆಸಿ, ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು, ಮಗುವಿನ ಭವಿಷ್ಯಕ್ಕಾಗಿ ಸರಕಾರದಿಂದ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದರು.

ಈ ವಿಷಯವನ್ನು ತಿಳಿದ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ನಾರಾವಿಯ ಮನೆಗೆ ಬಂದು ಪರಿಶೀಲನೆ ನಡೆಸಿ ಮನೆಯವರ ಜೊತೆ ಮಾತುಕತೆ ನಡೆಸಿದ್ದರು. ಬಳಿಕ ಮೃತದೇಹವನ್ನು ಪುನಃ ಮಂಗಳೂರಿನ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಕೊಂಡೋಗಿ ಶವದ ಮರಣೋತ್ತರ ಪರೀಕ್ಷೆಯನ್ನು ನಡೆಸಿ, ನಾರಾವಿಯ ಪತಿಯ ಮನೆಯ ಬಳಿ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು.

Related posts

ತುಳುವ ಮಹಾಸಭೆಯ ಬೆಳ್ತಂಗಡಿ ತಾಲೂಕು ನೂತನ ಸಂಚಾಲಕರಾಗಿ ಬಾಲಕೃಷ್ಣ ವಿ. ಶೆಟ್ಟಿ ಸವಣಾಲು ಆಯ್ಕೆ

Suddi Udaya

ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ನಿಡ್ಲೆ ಗ್ರಾಮದ ಕಾಂಗ್ರೆಸ್ ಬೆಂಬಲಿಗರು ಹರೀಶ್ ಪೂಂಜ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

Suddi Udaya

ಸೌತಡ್ಕ ಪರಿಸರದಲ್ಲಿ ಬೀಡು ಬಿಟ್ಟ ಅರಣ್ಯ ಇಲಾಖೆ: ಸುಳ್ಳು ಸುದ್ದಿಗಳಿಗೆ ಕಿವಿ ಕೊಡದಂತೆ ಮನವಿ

Suddi Udaya

ಬೆಳ್ತಂಗಡಿ ಸರ್ಕಲ್ ಇನ್ಸ್‌ ಪೆಕ್ಟರ್ ಆಗಿ ನಾಗೇಶ್ ಕದ್ರಿ ಮರು ನೇಮಕ

Suddi Udaya
error: Content is protected !!