26.2 C
ಪುತ್ತೂರು, ಬೆಳ್ತಂಗಡಿ
September 22, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಎಲ್‌ಸಿಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಕ್ಯಪದವು: ಎಲ್‌ಸಿಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ.೫ರಂದು ಆಚರಿಸಲಾಯಿತು. ಪರಿಸರ ಮಹತ್ವ ಮತ್ತು ಅದನ್ನು ಸಂರಕ್ಷಿಸುವ ಅಗತ್ಯತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.

ಪರಿಸರ ದಿನದ ವಿಶೇಷತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಲು ವಿವಿಧ ಗಿಡಗಳನ್ನು ನೀಡಿ, ಅದರ ಪರಿಚಯವನ್ನು ಮಾಡಿ ಉಪಯೋಗವನ್ನು ತಿಳಿಸಿಕೊಡಲಾಯಿತು. ವಿದ್ಯಾರ್ಥಿಗಳು ಅತ್ಯಂತ ಆಸಕ್ತಿಯಿಂದ ಆಯಾ ಶಿಕ್ಷಕರೊಂದಿಗೆ, ಶಾಲಾ ಉದ್ಯಾನದಲ್ಲಿ, ಹೂವಿನ ಗಿಡ, ಔಷಧಿ ಗಿಡ ಹಾಗೂ ಹಣ್ಣಿನ ಗಿಡಗಳನ್ನು ಸೇರಿದಂತೆ ವಿವಿಧ ಮರಗಳನ್ನು ನೆಡುವುದರ ಮೂಲಕ ಪರಿಸರ ದಿನವನ್ನು ಆಚರಿಸಿದರು.

ದಿನಾಚರಣೆಗಳು ಕೇವಲ ಒಂದು ದಿನಕ್ಕೆ ಮೀಸಲಾಗದೆ ವಿದ್ಯಾರ್ಥಿಗಳು ಪರಿಸರ ರಕ್ಷಣೆಯ ಕಾಳಜಿಯನ್ನು ವಹಿಸುವುದು ಮತ್ತು ಇತರರಲ್ಲಿಯೂ ಜಾಗೃತಿಯನ್ನು ಮೂಡಿಸುವ ಅಗತ್ಯತೆಯ ಬಗ್ಗೆ ಮನ ಮುಟ್ಟುವಂತೆ ತಿಳಿಸಲಾಯಿತು. “ಇರುವುದೊಂದೇ ಭೂಮಿ: ಇದರ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಧ್ಯೇಯ ವಾಕ್ಯದೊಂದಿಗೆ ಎಲ್ಲರೂ ಪರಿಸರ ದಿನದ ಮಹತ್ವವನ್ನು ತಿಳಿದುಕೊಂಡರು.

ಈ ಕಾರ್ಯಕ್ರಮದಲಿ ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೊ, ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮುಖ್ಯಶಿಕ್ಷಕಿ ವಿಜಯಾ ಕೆ, ಸಂಸ್ಥೆಯ ಸಂಯೋಜಕ ಯಶವಂತ್ ಜಿ. ನಾಯಕ್ ಹಾಗೂ ಬೋಧಕ, ಬೋಧಕೇತರ ವರ್ಗ ಉಪಸ್ಥಿತರಿದ್ದರು.

Related posts

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸಂಭ್ರಮ ಶನಿವಾರ’ ಆಚರಣೆ

Suddi Udaya

ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ: ಕೇಶವ ಫಡಕೆ ಅಧ್ಯಕ್ಷ – ಸಂದೀಪ್ ಪೂಜಾರಿ ಕಾರ್ಯದರ್ಶಿ

Suddi Udaya

ಕರಂಬಾರು: ಕಾಜಿಮುಗೇರು ಗೇರು ತೋಟಕ್ಕೆ ಬೆಂಕಿ

Suddi Udaya

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಯನ್ಸ್ ವಿಭಾಗದ ಸಹ ಪ್ರಾಧ್ಯಾಪಕ ಮನೋಜ್ ಗಡಿಯಾರ್ ಅವರಿಗೆ ಪಿ.ಎಚ್.ಡಿ. ಪದವಿ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಇವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಓವರಂ ಮ್ಯಾಚ್ ‘ರಾಜೇಶ್ವರಿ ರತ್ನ ಟ್ರೋಫಿ’ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!