28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕನ್ಯಾಡಿ II ಸ. ಉ. ಹಿ.ಪ್ರಾ. ಶಾಲೆಯಲ್ಲಿ ನೂತನ ಎಲ್‌ಕೆಜಿ ತರಗತಿ ಶುಭಾರಂಭ

ಧರ್ಮಸ್ಥಳ: ಕನ್ಯಾಡಿ II ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೊಸದಾಗಿ ಪೂರ್ವ ಪ್ರಾಥಮಿಕ ಶಿಕ್ಷಣ (ಎಲ್‌ಕೆಜಿ) ಆಂಗ್ಲ ಮಾಧ್ಯಮವು ಶುಭಾರಂಭಗೊಂಡಿತು.

ಶ್ರೀಮತಿ ಜಾನಕಿ ರಾಮಯ್ಯ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಕೆ ನಂದ ವಹಿಸಿದ್ದರು.

ಮುಖ್ಯ ಅತಿಥಿಗಳಾದ ಧರ್ಮಸ್ಥಳ ಗ್ರಾ.ಪಂ. ಸದಸ್ಯ ಹರೀಶ್ ಸುವರ್ಣ, ಶ್ರೀಮತಿ ಪವಿತ್ರ ಸುಕುಮಾರ್ ಶೆಟ್ಟಿ, ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಪ್ರಭಾಕರ್ ಗೌಡ ಬೊಳ್ಮಾ, ಉಪಾಧ್ಯಕ್ಷೆ ಶ್ರೀಮತಿ ಚಂದ್ರಾವತಿ, ಗೌರವ ಸಲಹೆಗಾರ ರಾಜೇಂದ್ರ ಅಜ್ರಿ, ಶಾಲಾ ಪ್ರಭಾರ ಮುಖ್ಯಶಿಕ್ಷಕಿ ಶ್ರೀಮತಿ ಪುಷ್ಪಾ ಎನ್. ಉಪಸ್ಥಿತರಿದ್ದು, ಎಲ್‌ಕೆಜಿ ಮಕ್ಕಳಿಗೆ ಪುಸ್ತಕವನ್ನು ವಿತರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರುಗಳಾದ ನೀಲಕಂಠ ಶೆಟ್ಟಿ ಮತ್ತು ಶೀನ, ಗೌರವ ಸಲಹೆಗಾರರಾದ ಸಿ.ಜಿ. ಪ್ರಭಾಕರ್ ಮತ್ತು ಅರುಣ್ ಕುಮಾರ್, ಎಸ್‌ಡಿಎಂಸಿ ಸದಸ್ಯರು, ಶಾಲಾ ಶಿಕ್ಷಕ ವೃಂದ, ಪೋಷಕರು, ಶಾಲಾ ಹಿರಿಯ ವಿದ್ಯಾರ್ಥಿಗಳು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಸ್ವಾಗತಿಸಿ, ಸಹಶಿಕ್ಷಕಿಯರಾದ ಶ್ರೀಮತಿ ರಾಜಿ ಸಿ.ಕೆ ವಂದಿಸಿ, ಶ್ರೀಮತಿ ಅರ್ಚನಾ ಕಾರ್ಯಕ್ರಮ ನಿರೂಪಿಸಿದರು.

Related posts

ಅಮೃತ ಸೋಮೇಶ್ವರರವರ ನೆನಪಿಗೆ ‘ಅಮೃತ ಮಥನ’ ಕಾರ್ಯಕ್ರಮ

Suddi Udaya

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ‘ಹೊಸಬೆಳಕು’ ಒಕ್ಕೂಟದ ಉದ್ಘಾಟನೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಪದವಿ ವಿಭಾಗದಲ್ಲಿ ನಶಾಮುಕ್ತ ಭಾರತ ಅಭಿಯಾನ ಕುರಿತು ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಸವಣಾಲು ಬೈರವಕಲ್ಲು ಶ್ರೀ ಬೈರವ ಮೂಜಿಲ್ನಾಯ ಪುರುಷರಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಶಿಕ್ಷಕರ ಸೇವೆ ಗುರುತಿಸಿ ಗೌರವಿಸಿದ ಬೆಳ್ತಂಗಡಿ ರೋಟರಿ ಕ್ಲಬ್

Suddi Udaya
error: Content is protected !!