26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ರಾಜಕೇಸರಿ ಸಂಘಟನೆಯಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಬರೆಯುವ ಪುಸ್ತಕ ವಿತರಣೆ

ಬೆಳ್ತಂಗಡಿ: ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಮನೋಜ್ ಕುಮಾರ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಲಾಯಿಲ ಗ್ರಾಮದ ದ.ಕ.ಜಿ.ಪಂ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ಬರೆಯುವ ಪುಸ್ತಕವನ್ನು ವಿತರಿಸಲಾಯಿತು.

ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ಮಾತನಾಡಿ ಕಳೆದ 13 ವರ್ಷಗಳಿಂದ ದೀಪಕ್ ಜಿ.ಅವರ ನೇತೃತ್ವದ ರಾಜಕೇಸರಿ ಸಂಘಟನೆ ರಕ್ತದಾನ, ಮನೆ ನಿರ್ಮಾಣ ಸೇರಿದಂತೆ ಹಲವಾರು ವಿವಿಧ ರೀತಿಯ ಸೇವಾ ಯೋಜನೆಗಳನ್ನು ಮಾಡುತ್ತಾ ಸಮಾಜದ ಅಶಕ್ತ ಕುಟುಂಬಗಳಿಗೆ ಸಹಾಯ ಹಸ್ತ ಚಾಚುತಿರುವುದರ ಒಟ್ಟಿಗೆ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ಪುಸ್ತಕ ವಿತರಣೆ ಮಾಡುವಂತಹ ಕೆಲಸವನ್ನು ಮಾಡುತ್ತಿದ್ದಾರೆ.ಅವರಿಗೆ ಇನ್ನಷ್ಟು ಸೇವಾ ಕಾರ್ಯಗಳನ್ನು ಮಾಡಲು ದೈವ ದೇವರುಗಳು ಶಕ್ತಿಯನ್ನು ನೀಡಲಿ, ನಾನು ಮಾಡಿದ ಮನವಿಗೆ ಸ್ಪಂದಿಸಿ ಪಡ್ಲಾಡಿ ಶಾಲೆಯ ಎಲ್ಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಬ್ಯಾಗ್ ಮತ್ತು ಪುಸ್ತಕವನ್ನು ರಾಜಕೇಸರಿ ಸಂಘಟನೆಯ ಪೋಷಕರಾದ ಕಟ್ಟೆಮಾರ್ ಮನೋಜ್ ಅವರ ಹುಟ್ಟುಹಬ್ಬದ ದಿನ ಶಾಲೆಗೆ ತಂದು ನೀಡಿರುವುದು ಸಂತಸ ತಂದಿದೆ. ಅವರಿಗೆ ಶಾಲಾ ಮಕ್ಕಳ ಪರವಾಗಿ ವಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ರಾಜಕೇಸರಿ ಸಂಸ್ಥಾಪಕ ದೀಪಕ್ ಜಿ. ಉತ್ತಮ ರೀತಿಯಲ್ಲಿ ಕಲಿತು ಸಮಾಜದಲ್ಲಿ ಗಣ್ಯ ವ್ಯಕ್ತಿಗಳಾಗಿ ಬಾಳಿ ಎಂದು ಮಕ್ಕಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ರಾಜಕೇಸರಿ ಸಂಘಟನೆಯ ಸಂಪತ್, ಜಗದೀಶ್ ಉಪಸ್ಥಿತರಿದ್ದರು.

ಪ್ರಭಾರ ಮುಖ್ಯಶಿಕ್ಷಕ ಯೋಗೀಶ್ ಸ್ವಾಗತಿಸಿ, ಸಹಶಿಕ್ಷಕ ಮಧು ವಂದಿಸಿದರು. ಶಾಲಾ ಮಕ್ಕಳು ಹುಟ್ಟುಹಬ್ಬ ಆಚರಿಸುತ್ತಿರುವ ಮನೋಜ್ ಕಟ್ಟೆಮಾರ್ ಅವರಿಗೆ ಶುಭಾಶಯ ಕೋರಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ. ಸಾಹಿತ್ಯ ಸಮ್ಮೇಳನ : ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ.ರಾ.ಗಣೇಶ್

Suddi Udaya

ನೆರಿಯ ವಲಯದ ಭಜನಾ ಪರಿಷತ್ತಿನ ಸಭೆ

Suddi Udaya

ಸೆ.21: ಆಳ್ವಾಸ್ ಮೆಡಿಕಲ್ ಕಾಲೇಜು ಉದ್ಘಾಟನೆ-ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭಾಗಿ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಬಲ್ಯೋಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ

Suddi Udaya

ಪ್ಲಾಂಟೇಶನ್ ಬೆಳೆಗಳನ್ನು ಗುತ್ತಿಗೆ ನೀಡಲು ಅರ್ಜಿ ಆಹ್ವಾನ: ಜುಲೈ 15 ರವರೆಗೆ ಕಾಲಾವಕಾಶ

Suddi Udaya

ಗುರುವಾಯನಕೆರೆ ವಿಕಾಸ ವಿ.ಸ. ಸಂಘದ ಮಹಾಸಭೆ: ಶೇ.15 ಡಿವಿಡೆಂಡ್ ಘೋಷಣೆ , ರೂ. 262.73 ಕೋಟಿ ವ್ಯವಹಾರ

Suddi Udaya
error: Content is protected !!