26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

ಉಜಿರೆ: “ಮಕ್ಕಳನ್ನು ಅವಕಾಶಗಳಿಂದ ವಂಚಿತಗೊಳಿಸಬೇಡಿ” ಎಂದು ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ದಂತ ವೈದ್ಯೆ ಡಾ| ಮೀರಾ ಅನುಪಮಾ ಹೇಳಿದರು.

ಸಂಪನ್ಮೂಲ ವ್ಯಕ್ತಿ ಬೆಳ್ತಂಗಡಿಯ ಸಿ.ಡಿ.ಪಿ.ಒ ಪ್ರಿಯಾ ಆಗ್ನೆಸ್ ಚಕ್ಕೋ “ಮಕ್ಕಳು ದೇವರಿಂದ ದೊರೆತ ಉಡುಗೊರೆ. ಮಕ್ಕಳನ್ನು ಇತರರೊಂದಿಗೆ ಹೋಲಿಸಬಾರದು” ಎಂದರು.

ಅವರು ಉಜಿರೆ ಎಸ್‌ಡಿಎಂ ಪದವಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಜೂ.6ರಂದು ನಡೆದ ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ 2025-26ನೇ ಶೈಕ್ಷಣಿಕ ಸಾಲಿನ ಕಿಂಡರ್ಗಾರ್ಟನ್ ಹಾಗೂ ಪ್ರಾಥಮಿಕ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿಷಯವಾರು ಶಿಕ್ಷಕರು ತಮ್ಮನ್ನು ಪರಿಚಯಿಸಿ, ಬೋಧನಾ ಶೈಲಿಯನ್ನು ವಿವರಿಸಿದರು. ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಮಮತಾ ಶೆಟ್ಟಿ ಹಾಗೂ ಶಿಕ್ಷಕಿ ನೀತು ಪ್ರಸಾದ್ ಕಾರ್ಯಕ್ರಮ ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಯುವತಿಯರೊಂದಿಗೆ ಅನುಚಿತ ವರ್ತನೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಹೊಸವರ್ಷಕ್ಕೆ ಧರ್ಮಸ್ಥಳ ದೇವಸ್ಥಾನದಲ್ಲಿ ಬೆಂಗಳೂರಿನ ಭಕ್ತರಿಂದ ಅಲಂಕಾರ ಸೇವೆ

Suddi Udaya

ಗುರುವಾಯನಕೆರೆ: ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು ನಿಧನ

Suddi Udaya

ಬೆಳ್ತಂಗಡಿ: ಜೀವನ್ ಜ್ಯೋತಿ ಸುರಕ್ಷಾದಿಂದ ಸಹಾಯಧನ ಹಸ್ತಾಂತರ

Suddi Udaya

ರಾಜ್ಯ ಸರ್ಕಾರದಿಂದ ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ : ಇದು ಬಡಜನರ ಮೇಲಿನ ಮರಣ ಶಾಸನ: ಶೇಖರ ಎಲ್

Suddi Udaya

ಏ. 3 ರಿಂದ 6: ವಿದ್ವತ್ ಕಾಲೇಜಿನಿಂದ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಪ್ರತಿಭಾನ್ವೇಷಣೆ ಪರೀಕ್ಷೆ–2026: 30 ಪ್ರಶ್ನೆಗಳು 30 ನಿಮಿಷ, ವಿಜೇತರಿಗೆ ಲ್ಯಾಪ್ಟಾಪ್-ಟ್ಯಾಬ್ ಬಹುಮಾನ

Suddi Udaya
error: Content is protected !!