25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ಸಂಘಟನೆ ವತಿಯಿಂದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ

ಕುಕ್ಕೇಡಿ: ಕೋಟಿ ಚೆನ್ನಯ ಸೇವಾ ಸಂಘಟನೆ ವತಿಯಿಂದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ಅಮ್ಮಾಜಿ ಪೂಜಾರಿ ಹಿರ್ತೊಟ್ಟು ಇವರ ಮನೆಯಲ್ಲಿ ನಡೆಯಿತು.

ಮುಖ್ಯ ಅತಿಥಿ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕ ಯೋಗೀಶ್ ಕುಮಾರ್ ಕೈರೋಡಿ ಮಾತನಾಡಿ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸಂಘಟನೆ ಮಾಡುತ್ತಿರುವ ಕೆಲಸ ಶ್ಲಾಘನೀಯ ನಾರಾಯಣ ಗುರುಗಳ ತತ್ವ ಸಿದ್ಧಾಂತವನ್ನು ಪಾಲಿಸಿಕೊಂಡು ಬಂದಿರುವ ಸಂಘಟನೆ ನಿಜಕ್ಕೂ ಸಮಾಜಕ್ಕೆ ಮಾದರಿ ಮಕ್ಕಳು ಸೇವಾ ಮನೋಭಾವನೆಗಳನ್ನು ಬೆಳೆಸಿಕೊಂಡು ಸಮಾಜದಲ್ಲಿ ಕೀರ್ತಿವಂತರಾಗಿ ಬಾಳಿ ಎಂದು ಕರೆ ನೀಡಿದರು.

ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಕೆ. ಅನಿತಾ ಶುಭ ಹಾರೈಸಿದರು. ಸಂಘದ ಅಧ್ಯಕ್ಷ ನವೀನ್ ಜೆ ಬುಳೆಕ್ಕರ ಅಧ್ಯಕ್ಷತೆ ವಹಿಸಿ ಸಂಘದ ಸೇವಾ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಧಾರ್ಮಿಕ ಮುಖಂಡ ಜನಾರ್ದನ ಪೂಜಾರಿ ಕಡ್ತಿಲ ಉಪಸ್ಥಿತರಿದ್ದರು.

ಕುಕ್ಕೇಡಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಜನಾರ್ಧನ ಪೂಜಾರಿ ಹಾಗೂ ಸಂಘದ ನಿಕಟಪೂರ್ವ ಅಧ್ಯಕ್ಷ ಸತೀಶ್ ಕೆರಿಯರ್ ಹಾಗೂ ಪ್ರಮುಖರಾದ ಯಶಲತಾ ಅಮ್ಮಾಜಿ ಉಪಸ್ಥಿತರಿದ್ದರು. ಸಂಘಟನೆಯ ಪದಾಧಿಕಾರಿಗಳು ಸಹಕರಿಸಿದರು.

ಸಂಘಟನೆಯ ನಿಕಟಪೂರ್ವ ಅಧ್ಯಕ್ಷ ರತ್ನಾಕರ್ ಸಾಲ್ಯಾನ್ ಅಂಕರ್ಜಾಲು ಪ್ರಾಸ್ತಾವಿಸಿ, ಸ್ವಾಗತಿಸಿದರು. ಕು. ಅಮೂಲ್ಯ, ಅನನ್ಯ ಪ್ರಾರ್ಥಿಸಿದರು. ರವಿ ಉಲ್ತೂರು ನಿರೂಪಿಸಿದರು. ಸಂಘದ ಗೌರವಾಧ್ಯಕ್ಷ ಅಮ್ಮಾಜಿ ಕೆ. ಪೂಜಾರಿ ಧನ್ಯವಾದವಿತ್ತರು.

Related posts

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಾರದ ಮಂಟಪ ಉಜಿರೆ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಪೂರ್ವಭಾವಿ ಸಭೆ

Suddi Udaya

ಕಳೆಂಜ : ಬಿಜೆಪಿ ಕಾರ್ಯಕರ್ತರಿಂದ ಬೈಕ್ ಜಾಥಾ

Suddi Udaya

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಭೇಟಿ

Suddi Udaya
error: Content is protected !!