26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.೫ರಂದು ವಿಶ್ವ ಪರಿಸರ ದಿನಾಚರಣೆಯನ್ನು ಪರಿಸರ ಸಂಘ ಮತ್ತು ಸ್ಕೌಟ್ಸ್ ಗೈಡ್ಸ್‌ನ ಜಂಟಿ ಆಶ್ರಯದಲ್ಲಿ ಆಚರಿಸಲಾಯಿತು.

ಶಾಲಾ ವಿದ್ಯಾರ್ಥಿಗಳು ಪ್ರತಿಜ್ಞೆ ಮಾಡುವುದರ ಮೂಲಕ ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು ಹೊತ್ತರು. ಶಾಲಾ ವಿದ್ಯಾರ್ಥಿನಿ ಕುಮಾರಿ ಅನುಜ್ಞ ಪರಿಸರ ದಿನಾಚರಣೆಯ ಕುರಿತು ಭಾಷಣ ಮಾಡಿದರು. ವಿದ್ಯಾರ್ಥಿಗಳು ಸಸಿಗಳನ್ನು ನೆಟ್ಟರು.

ಸಹಶಿಕ್ಷಕಿ ಸ್ಕೌಟ್ ಮಾಸ್ಟರ್ ಶ್ರೀಮತಿ ಆಶಾ ಪ್ಲಾಸ್ಟಿಕ್‌ನಿಂದ ಆಗುವ ದುಷ್ಪರಿಣಾಮಗಳನ್ನು ಹಾಗೂ ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮಕ್ಕಳಿಗೆ ತಿಳಿ ಹೇಳಿದರು.

ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ, ಪರಿಸರ ಸಂಘದ ಶಿಕ್ಷಕಿ ಶ್ರೀಮತಿ ಅಮೃತ ವಿ ಶೆಟ್ಟಿ , ಗೈಡ್ ಕ್ಯಾಪ್ಟನ್ ಶ್ರೀಮತಿ ಗೀತಾ, ಶ್ರೀಮತಿ ಶೀಭಾ, ಶ್ರೀಮತಿ ದೀಕ್ಷಾ, ಸ್ಕೌಟ್ ಮಾಸ್ಟರ್ ಶ್ರೀಮತಿ ಶಶಿಕಲಾ, ಶ್ರೀಮತಿ ಜ್ಯೋತಿ ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಬೆಳ್ತಂಗಡಿ: ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ 20 ಡಿವಿಡೆಂಡ್ ಘೋಷಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಮಳೆ ಹಾನಿಗೊಳಗಾದ ನೆರಿಯ, ಚಿಬಿದ್ರೆ ಗ್ರಾಮಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ: ಪರಿಹಾರಕ್ಕಾಗಿ ಸರಕಾರಕ್ಕೆ ಒತ್ತಾಯಿಸುವ ಭರವಸೆ

Suddi Udaya

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರಿಂದ ಆಶೀರ್ವಾದ ಪಡೆದ ಹರೀಶ್ ಪೂಂಜ

Suddi Udaya

ಕಡಿರುದ್ಯಾವರ ಶಾಲಾ ಹಿಂಭಾಗದ ಗುಡ್ಡಕ್ಕೆ ಬೆಂಕಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ಉಡುಪಿ ವಿಭಾಗದಿಂದ ಬ್ಯಾರಿಕೇಡ್ ಹಾಗೂ ಗಡಿಯಾರ ಕೊಡುಗೆ

Suddi Udaya
error: Content is protected !!