28.6 C
ಪುತ್ತೂರು, ಬೆಳ್ತಂಗಡಿ
September 19, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಬೆಳ್ತಂಗಡಿ: ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ವತಿಯಿಂದ, ಕೃಷಿ ಇಲಾಖೆ ಬೆಳ್ತಂಗಡಿ ಇವರ ಸಹಯೋಗದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ ಜೂ.4ರಂದು ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜರುಗಿತು.

ಪುತ್ತೂರು ಐ.ಸಿ.ಏ.ಆರ್ ಗೇರು ಸಂಶೋಧನಾ ಕೇಂದ್ರ ಮುಖ್ಯಸ್ಥ ದಿನಕರ ಅಡಿಗ ಗೇರು ಸಂಶೋಧನಾ ಕೇಂದ್ರದಲ್ಲಿ ರೈತರಿಗೆ ಲಭ್ಯವಿರುವ ಇತ್ತೀಚಿನ ಕೊಯ್ಲು ಹಾಗೂ ಕೊಯ್ಲಿನೋತ್ತರ ತಂತ್ರಜ್ಞಾನಗಳ ಕುರಿತು ವಿವರಿಸಿದರು.

ವಿಜ್ಞಾನಿ ಡಾ. ಭಾಗ್ಯ ರೈತರಿಗೆ ಸಂಶೋಧನಾ ಕೇಂದ್ರದಲ್ಲಿ ಲಭ್ಯವಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಮಂಗಳೂರು ಕೃಷಿ ವಿಜ್ಞಾನ ಕೇಂದ್ರ ತೋಟಗಾರಿಗ ವಿಜ್ಞಾನಿ ಡಾ. ರಶ್ಮಿ ಅಡಿಕೆ, ತೆಂಗು ಸಹಿತ ಪ್ರಮುಖ ತೋಟಗಾರಿಕೆ ಬೆಳೆಗಳ ಮುಂಗಾರು ಹಂಗಾಮಿನ ಸಮಗ್ರ ನಿರ್ವಹಣೆಯ ಉಪನ್ಯಾಸ ನೀಡಿದರು.

ವಿಜ್ಞಾನಿ ಡಾ. ಹರೀಶ್ ಶೆಣೈ ಭತ್ತದ ತಳಿಗಳ ಬಗ್ಗೆ ವಿವರಿಸಿ ಬೀಜೋಪಚಾರದ ಮಹತ್ವವನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿ, ಸುರಕ್ಷಿತ ಪೀಡನಾಶಕಗಳ ಬಳಕೆ ಕುರಿತು ತಿಳಿಸಿದರು.

ಬೆಳ್ತಂಗಡಿ ತಾಲೂಕು ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ ಏ.ಡಿ. ಕೃಷಿ ಇಲಾಖೆ ಯೋಜನೆಗಳ ಬಗ್ಗೆ ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ್ ತೋಟಗಾರಿಕೆ ಇಲಾಖೆ ಯೋಜನೆಗಳ ಬಗ್ಗೆ ಹಾಗೂ ಎಲೆ ಚುಕ್ಕಿ ರೋಗದ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು.

ಕೃಷಿ ಅಧಿಕಾರಿ ಗಣೇಶ್, ಆತ್ಮ ಸಿಬ್ಬಂದಿಗಳಾದ ನವನೀತ, ಸಾಯಿನಾಥ, ಕೃಷಿ ಇಲಾಖೆ ಸಿಬ್ಬಂದಿಗಳು ಹಾಗೂ ತಾಲೂಕಿನ ವಿವಿಧ ಕೃಷಿ ಸಖಿಯರು ಮತ್ತು ಪ್ರಗತಿಪರ ಕೃಷಿಕರು ಭಾಗವಹಿಸಿದ್ದರು.

Related posts

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಕಣಿಯೂರು ಗ್ರಾಮ ಪಂಚಾಯತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಉಜಿರೆ: ಕುಂಜರ್ಪದಲ್ಲಿ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

Suddi Udaya
error: Content is protected !!