September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಹಬ್ಬದ ಆಚರಣೆಯನ್ನು ಜೂ.೬ರಂದು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭಿಸಲಾಯಿತು. ವಿದ್ಯಾರ್ಥಿಗಳು ಬಕ್ರೀದ್ ಹಬ್ಬದ ಆಚರಣೆಯನ್ನು ಹಾಡು, ನೃತ್ಯದ ಮೂಲಕ ಪ್ರದರ್ಶಿಸಿದರು.

ಮುಖ್ಯ ಅತಿಥಿ ಮಡಂತ್ಯಾರು ಚರ್ಚಿನ ಸಹಾಯಕ ಧರ್ಮ ಗುರುಗಳಾದ ವಂ|ಸ್ವಾ ಲ್ಯಾರಿ ಫ್ರಾಂಕ್ಲಿನ್ ಪಿಂಟೋ ಮಾತನಾಡಿ ನಾವು ಬೇರೆಯವರಿಗೆ ದಾನ ಮಾಡಿದರೆ ನಮಗೆ ದೇವರು ಅದಕ್ಕಿಂತ ಜಾಸ್ತಿ ಕೊಡುತ್ತಾನೆ ಎಂದು ಹೇಳಿ ವಿದ್ಯಾರ್ಥಿಗಳಿಗೆ ಬಕ್ರೀದ್ ಹಬ್ಬದ ಶುಭಾಶಯವನ್ನು ಕೋರಿದರು.

ಶಾಲಾ ಮುಖ್ಯೋಪಾಧ್ಯಾಯ ವಂ|ಸ್ವಾ| ದೀಪಕ್ ಲಿಯೋ ಡೇಸ ಮಾತನಾಡಿ ನಾವು ತ್ಯಾಗ ಮಾಡುವುದರ ಜೊತೆಗೆ ಬೇರೆಯವರ ಬಗ್ಗೆ ಕಾಳಜಿ ವಹಿಸಬೇಕೆಂದು ಹೇಳಿ ವಿದ್ಯಾರ್ಥಿಗಳಿಗೆ ಬಕ್ರೀದ್ ಹಬ್ಬದ ಶುಭಾಶಯಗಳು ಕೋರಿದರು.
ವಿದ್ಯಾರ್ಥಿಗಳಾದ ಕು. ರಿವಾನಿಯ ಶಾನ್ವಿ ನಿರೂಪಿಸಿ, ಮಿನ್ಶ ಹನೀಫ್ ಸ್ವಾಗತಿಸಿ, ಮಹಮ್ಮದ್ ಫಾಹಿಝ್ ವಂದಿಸಿದರು.

Related posts

ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ ನಿಧನ

Suddi Udaya

ಧರ್ಮಸ್ಥಳ: ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಪೋಸ್ಟ್‌ : ಮುಂಬಯಿಯ ಶ್ರೀನಾಥ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ಗುರುವಾಯನಕೆರೆ ಎಸ್‌ಡಿಟಿಯು ಆಟೋ ಯೂನಿಯನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಾ.8, ಗುರುವಾಯನಕೆರೆ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ದೈವರಾಜ ಗುಳಿಗ ನೇಮೋತ್ಸವ

Suddi Udaya
error: Content is protected !!