September 6, 2026
ಕೃಷಿವರದಿಶಾಲಾ ಕಾಲೇಜು

ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಪೆರೋಡಿತ್ತಾಯಕಟ್ಟೆ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಜೂ.5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಮುಸ್ತಫಾ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್‌.ಡಿ.ಎಂ.ಸಿ ಅಧ್ಯಕ್ಷ ಮುಸ್ತಾಫರವರು ಅರಣ್ಯ ಇಲಾಖೆಯಿಂದ ತಾವೇ ಸ್ವತಃ ಗಿಡಗಳನ್ನು ತಂದು ಕೊಡುವ ವ್ಯವಸ್ಥೆಯನ್ನು ಮಾಡಿರುತ್ತಾರೆ.

ಶಾಲೆಯ ಕೆಲವು ವಿದ್ಯಾರ್ಥಿಗಳು ತೆಂಗಿನ ಸಸಿಗಳನ್ನು, ಹಣ್ಣು ಹಂಪಲಿನ ಗಿಡಗಳನ್ನು ಮನೆಯಿಂದ ತಂದು ಶಾಲಾ ಆವರಣದೊಳಗೆ ನೆಡುವುದರೊಂದಿಗೆ ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಿದರು.ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ಚಿತ್ರಕಲೆ ಸ್ಪರ್ಧೆಯನ್ನು ಏರ್ಪಡಿಸಿದ್ದು, ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಬಹುಮಾನ ನೀಡಿ ಅಭಿನಂದಿಸಲಾಯಿತು. ಶಾಲಾ ವಿಜ್ಞಾನ ಶಿಕ್ಷಕಿ ದೇವಿಕಾ ಪರಿಸರ ಸಂರಕ್ಷಣೆ ಮತ್ತು ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.

ಶಾಲಾ ಮುಖ್ಯ ಶಿಕ್ಷಕಿ ಬೆನೆಡಿಕ್ಟಾ ಪಾಯ್ಸ್ ಹಾಗೂ ಅಧ್ಯಾಪಕ ವೃಂದದವರು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಉಜಿರೆ ಶ್ರೀ ಧ.ಮಂಜುನಾಥೇಶ್ವರ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ತುಳುನಾಡು ಒಕ್ಕೂಟ ಸಂಘಟನೆಯ ನೇತೃತ್ವದಲ್ಲಿ 5ನೇ ವರ್ಷದ ‘ಚೆನ್ನೆಮಣೆ ಗೊಬ್ಬು ಪಂಥೋ’ ಕಾರ್ಯಕ್ರಮ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆ ಪ್ರತಿಭಾ ಪುರಸ್ಕಾರ 2025

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಿವಗಿರಿ ಯಾತ್ರೆ, ಹಲವಾರು ಕ್ಷೇತ್ರ ದರ್ಶನ

Suddi Udaya

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಫ್‌ಎಸ್ಎಲ್ ವರದಿ ಬರುವವರೆಗೂ ಎಸ್‌ಐಟಿ ತನಿಖೆ ಸ್ಥಗಿತ: ಗೃಹ ಸಚಿವ ಪರಮೇಶ್ವರ್

Suddi Udaya

ಫೆ.19: ಬೆಳ್ತಂಗಡಿಯಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಹೊಸ ಪರಿಕಲ್ಪನೆಯೊಂದಿಗೆ ಸಾಂಸ್ಕೃತಿಕ ವೈಭವ

Suddi Udaya
error: Content is protected !!