25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿ

ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನಿಸಿದ ಆರೋಪ:ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು-ಆರೋಪಿಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನಿಸಿದ ಪ್ರಕರಣ ಸಂಬಂಧ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಹುಕ್ರೋಟ್ಟು ರಸ್ತೆಯಲ್ಲಿ ಜೂ.6 ರಂದು ಸಂಜೆ ತನ್ನ ಮನೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಯುವಕನೊಬ್ಬ ಹಿಂಬಾಲಿಸಿಕೊಂಡು ಬಂದು ಮಾನಭಂಗಕ್ಕೆ ಯತ್ನಿಸಿದ್ದ ಎಂದು ನೊಂದ ಮಹಿಳೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. ಧರ್ಮಸ್ಥಳ ಪೊಲೀಸರು BNS 74,78(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಧರ್ಮಸ್ಥಳ ಪೊಲೀಸ್‌ ಠಾಣೆಯ ಸಬ್ ಇನ್ಸ್‌ಪೆಕ್ಟ‌ರ್ ಸಮರ್ಥ ಆ‌ರ್ ಗಾಣಿಗೇರ ಮತ್ತು ಸಿಬ್ಬಂದಿ ಪ್ರಕರಣ ಬಗ್ಗೆ ತನಿಖೆ ನಡೆಸಿ ವಿವಿಧ ಆಯಾಮಗಳಲ್ಲಿ ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕಿ ಜೂ.7 ರಂದು ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಮುಂಡೇಲು ನಿವಾಸಿ ಎಮ್.ಡಿ.ನಿಯಾಜ್(20 ವ) ಎಂಬಾತನನ್ನು ಕಕ್ಕಿಂಜೆಯಲ್ಲಿ ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಜೂ.6 ರಂದು ಸಂಜೆ ಹಾಜರುಪಡಿಸಿದ್ದು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

Related posts

ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರಿನಿಂದ ಬಸ್ ತಡೆಹಿಡಿದು ಗಲಾಟೆ

Suddi Udaya

ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿ ಸಾತ್ವಿಕಾ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ

Suddi Udaya

ವೇಣೂರು: ಪೋಕ್ಸೋ ಪಕ್ರರಣ, ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya

ಗುಂಡ್ಯ ಬಳಿ ಟ್ರಕ್ ಕಾರಿಗೆ – ಡಿಕ್ಕಿ ಗೇರುಕಟ್ಟೆ ಪರಿಸರದ ಐವರಿಗೆ ಗಾಯ:ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

Suddi Udaya

ಪುದುವೆಟ್ಟಿನ ಮಹಿಳೆ ಪುಣ್ಯಶ್ರೀ ಪುತ್ತೂರು ತಾಯಿ ಮನೆಯಲ್ಲಿ ಬಾವಿಗೆ ಬಿದ್ದು ಮೃತ್ಯು

Suddi Udaya
error: Content is protected !!