25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಹಾಸ್ ಶೆಟ್ಟಿ ಹತ್ಯೆ ನಡೆಸಿದ ಜಿಹಾದಿಗಳನ್ನು ಹೆಡೆಮುರಿ ಕಟ್ಟಲು ತನಿಖೆ ರಾಷ್ಟ್ರೀಯ ತನಿಖಾದಳಕ್ಕೆ- ಹರೀಶ್ ಪೂಂಜ

ಬೆಳ್ತಂಗಡಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಭೀಕರ ಹತ್ಯೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಕಾ ದಳಕ್ಕೆ ವಹಿಸಿದ್ದು ದಕ್ಷಿಣ ಕನ್ನಡದ ಸಮಸ್ತ ಹಿಂದೂ ಸಮಾಜ ಇದನ್ನು ಮನಪೂರ್ವಕವಾಗಿ ಸ್ವಾಗತಿಸುತ್ತಿದೆ.

ಸುಹಸ್ ಶೆಟ್ಟಿ ಅವರ ಹತ್ಯೆಯಲ್ಲಿ ಪಾಲ್ಗೊಂಡಿದ್ದ ಪಿ ಎಫ್ ಐ ಹಾಗೂ ಇನ್ನಿತರ ಜಿಹಾದಿ ಸಂಘಟನೆಗಳ ಬೇರುಗಳನ್ನು ಬುಡ ಸಮೇತ ಕಿತ್ತು ಹಾಕಲು ಮತ್ತು ಈ ಹತ್ಯೆಯ ಹಿಂದಿರುವ ಕಾಣದ ಕೈಗಳನ್ನು ಪತ್ತೆಹಚ್ಚಿ, ಈ ಸಂಚಿಗೆ ಬೇಕಾದ ಹಣಕಾಸಿನ ವ್ಯವಸ್ಥೆಯನ್ನು ಒದಗಿಸಿದ ದೇಶ ಹಾಗು ಪರದೇಶಗಳ ಹಣದ ಮೂಲಗಳನ್ನು ಪತ್ತೆಹಚ್ಚಲು NIA ಅತ್ಯಂತ ಸಮರ್ಥವಾಗಿ ಕಾರ್ಯನಿರ್ವಹಿಸಲಿದೆ ಎನ್ನುವ ವಿಶ್ವಾಸ ನನಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಮುಂತಾದ ಕಡೆಗಳಲ್ಲಿ ಬೇರು ಬಿಟ್ಟಿರುವ ಜಿಹಾದಿಗಳನ್ನು ಮೂಲಭೂತ ವಾದಿ ಸಂಘಟನೆಗಳನ್ನು ಮಟ್ಟ ಹಾಕಲು ರಾಷ್ಟ್ರೀಯ ತನಿಖಾ ದಳ ನಡೆಸುವ ತನಿಖೆ ಅತ್ಯಂತ ಸಹಕಾರಿಯಾಗಲಿದೆ ಎನ್ನುವ ವಿಶ್ವಾಸ ನಮಗಿದೆ. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ತನ್ನ ತುಷ್ಟಿಕರಣದ ರಾಜಕೀಯವನ್ನು ಮುಂದುವರಿಸಿ ಸುಹಾಸ್ ಶೆಟ್ಟಿಯವರ ಹತ್ಯೆಯ ತನಿಖೆಯನ್ನು NIA ಗೇ ವಹಿಸಲು ನಿರಾಕರಿಸಿದಾಗ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಯವರ ನೇತೃತ್ವದ ಕೇಂದ್ರ ಸರ್ಕಾರ ಮುಂದಾಳತ್ವವನ್ನು ವಹಿಸಿಕೊಂಡು ಈ ತನಿಖೆಯನ್ನು NIA ಗೇ ವಹಿಸಿದೆ ಈ ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿಜಿ ಅವರಿಗೆ, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಜಿಯವರಿಗೆ,ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ ವೈ ವಿಜಯೇಂದ್ರ ಅವರಿಗೆ ಹಾಗೂ ದಕ್ಷಿಣ ಕನ್ನಡದ ಸಮಸ್ತ ಹಿಂದೂ ಸಂಘಟನೆಗಳ ಹಿರಿಯರಿಗೆ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ.

Related posts

ಅರಸಿನಮಕ್ಕಿ: ನೆಕ್ಕರಡ್ಕ ಶ್ರೀ ವಿಠೋಬಾ ರಕುಮಾಯಿ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜರಿಂದ 5 ಲಕ್ಷ ರೂ. ಮಂಜೂರು

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಜಾಗೃತಿ ಸಪ್ತಾಹ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿ ದೇವರ ಪುನರ್‌ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಮುದ್ದಿಗೆಯಲ್ಲಿ ಪ್ರೇಮಚಂದ್ರರವರ ವಿದ್ಯುತ್ ಪಂಪ್ ಶೆಡ್ ಕುಸಿತ : ಅಪಾರ ಹಾನಿ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಾಲಾ- ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!