September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

ಮುಂಡಾಜೆ: ಕಟೀಲು ಮೇಳದ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67ವ) ನಿನ್ನೆ ರಾತ್ರಿ(ಜೂ.7) ಹೃದಯಾಘಾತದಿಂದ ನಿಧನರಾದರು.

ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿಯಾಗಿ, 3ನೇ ಮೇಳದ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ದರು.

ಕದ್ರಿ, ಕರ್ಣಾಟಕ, ಕುಂಬಳೆ, ಬಪ್ಪನಾಡು, ಧರ್ಮಸ್ಥಳ ಸೇರಿದಂತೆ ಹಲವಾರು ಮೇಳಗಳಲ್ಲಿ ಕಳೆದ ಐವತ್ತು ವರ್ಷಗಳಿಂದ ಪಾತ್ರಗಳನ್ನು ನಿರ್ವಹಿಸಿದ್ದರು.

ವಿದ್ಯುನ್ಮತಿ ಕಲ್ಯಾಣ ಪ್ರಸಂಗ ಪುಸ್ತಕದಲ್ಲಿ ಮುಂಡಾಜೆ ಅವರ ಸ್ತ್ರೀ ವೇಷದ ಚಿತ್ರ ಮುಖ ಪುಟದಲ್ಲಿದ್ದು ಅವರ ವೇಷದ ಸರಣಿಯ ದಾಖಲಾತಿ ಒದಗಿಸುತ್ತದೆ. ಪುಂಡು, ರಾಜವೇಶ, ನಾಟಕೀಯ ವೇಷ ಗಳಲ್ಲಿ ನುರಿತ ಕಲಾವಿದರಾಗಿದ್ದರು.

ಪ್ರಸ್ತುತ ಇವರು ತಮ್ಮ ಕುಟುಂಬದೊಂದಿಗೆ ಮಂಗಳೂರಿನ ವಾಮಂಜೂರಿನಲ್ಲಿ ವಾಸ್ತ್ಯವ್ಯ ಹೊಂದಿದ್ದರು. ಮೃತರು ಪತ್ನಿ, ಈರ್ವರು ಗಂಡು ಮಕ್ಕಳು, ಓರ್ವೆ ಪುತ್ರಿ , ಮೊಮ್ಮಕ್ಕಳು ಹಾಗೂ ಬಂಧು ಮಿತ್ರರನ್ನೂ ಅಗಲಿದ್ದಾರೆ.

Related posts

ಫೆ.8: ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಪರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಮತಯಾಚನೆ

Suddi Udaya

ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ನಾರಾವಿ ಸಂತ ಅಂತೋಣಿ ಪ.ಪೂ ಕಾಲೇಜು ಶೇ.98 ಫಲಿತಾಂಶ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾಮಹೋತ್ಸವ: ದೇವರಿಗೆ ಪಂಚಾಮೃತ ಅಭಿಷೇಕ

Suddi Udaya
error: Content is protected !!