September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಎಸ್‌ಡಿಎಂ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿವೇಕ ಜಾಗೃತಿ ಉಪನ್ಯಾಸ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿವೇಕ ಜಾಗೃತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿ ಆಂಧ್ರಪ್ರದೇಶ ಕಡಪಾದ ಶ್ರೀ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಅನುಪಮಾನಂದಜೀಯವರು ವಿವೇಕಾನಂದರ ಶಿಕ್ಷಣ ತತ್ವಗಳು ಮತ್ತು ಇಂದಿನ ಶಿಕ್ಷಣ ವ್ಯವಸ್ಥೆಯ ಬಗ್ಗೆ ಮಾತನಾಡಿ ವಿವೇಕಾನಂದರು ನಮಗೆ ಆದರ್ಶ ವ್ಯಕ್ತಿ. ಅವರ ವಿಚಾರಧಾರೆ, ಚಿಂತನೆ ಮತ್ತು ಬದುಕಿನ ಹಾದಿ ನಮಗೆ ಸ್ಫೂರ್ತಿ. ಆದುದರಿಂದ ವೈಚಾರಿಕ ಸ್ವಾವಲಂಬನೆ ನೀಡುವುದೇ ಶಿಕ್ಷಣವಾಗಿದೆ. ಶಿಕ್ಷಣವು ದೇಶಾಭಿಮಾನ ಬೆಳೆಸುವುದರೊಂದಿಗೆ ಸರ್ವ ಸಮಸ್ಯೆಗೆ ಔಷಧಿಯಾಗಿದ್ದು ಸರ್ವತೋಮುಖ ಬೆಳವಣಿಗೆಗೆ ಸಾಧ್ಯವಾಗಿದೆ. ಶಿಕ್ಷಕರು ತಮ್ಮ ಶಿಕ್ಷಣ ವಿದ್ಯಾಲಯ ಮತ್ತು ಪಠ್ಯ ವಿಷಯದ ಬಗ್ಗೆ ಗೌರವವಿಟ್ಟು ಪ್ರತಿಯೊಬ್ಬವಿದ್ಯಾರ್ಥಿಗೂ ಮಹತ್ವ ನೀಡಿದಾಗ ವಿದ್ಯಾರ್ಥಿಯ ಬದುಕಿನ ಹಾದಿ ಸುಗಮವಾಗುತ್ತದೆ ಎಂದರು.

ಕ್ಯಾ. ಬೆಳ್ಳಾಲ ಗೋಪಿನಾಥ್ ಸ್ವಾಮಿ ವಿವೇಕಾನಂದರ ಬಗ್ಗೆ ಮತ್ತು ಶ್ರೀ ರಾಮಕೃಷ್ಣ ಆಶ್ರಮದ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಸ್ವಾಮಿ ಅನುಪಮಾನಂದಜೀಯವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಭಾಗವಹಿಸಿದ್ದರು.

ವೇದಿಕೆಯಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಧನ್ಯಕುಮಾರ್, ಬಿ.ಎಡ್. ಕಾಲೇಜಿನ ಪ್ರಾಂಶುಪಾಲ ಡಾ. ಸಂತೋಷ್ ಸಲ್ಡಾನ, ಶ್ರೀ. ಧ. ಮಂ. ವಸತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸುನಿಲ್ ಪಂಡಿತ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬಿ.ಎಡ್. ಕಾಲೇಜಿನ ಎಲ್ಲಾ ಉಪನ್ಯಾಸಕ ವೃಂದ ಮತ್ತು ಪ್ರಥಮ ಹಾಗೂ ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿಗಳು ಹಾಗೂ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಇತರ ಅಂಗಸಂಸ್ಥೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಪ್ರಥಮ ಬಿ.ಇಡಿ. ಪ್ರಶಿಕ್ಷಣಾರ್ಥಿ ಸಾಯಿಧೃತಿ ಸ್ವಾಮಿ ಅನುಪಮಾನಂದಜೀ ಯವರನ್ನು ಪರಿಚಯಿಸಿ, ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ತೇಜಸ್ವಿನಿ ಕಾಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಮಡoತ್ಯಾರು ನಗರದಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya

ಸೆ. 6 : ಬಂಟರ ಯಾನೆ ನಾಡವರ ಸಂಘದಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ -ಕಾಲೇಜು ಗಣರಾಜ್ಯೋತ್ಸವ ಆಚರಣೆ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿoಜೆ ರವರಿಗೆ ಕಿರಣ್ ಚಂದ್ರ ಡಿ ಪುಷ್ಪಗಿರಿ ಹಾಗೂ ಭಕ್ತಿ ಹೆಜ್ಜೆ ಬಳಗದಿಂದ ಸನ್ಮಾನ

Suddi Udaya

ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಎರಡು ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್ ಕೊಡುಗೆ

Suddi Udaya
error: Content is protected !!