September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

ಗುರುವಾಯನಕೆರೆ: ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ ಜೂ.9 ರಂದು ವಿದ್ಯಾಸಾಗರ್ ಕ್ಯಾಂಪಸ್ ನಲ್ಲಿ ನಡೆಯಿತು.

ವಿದ್ಯಾರ್ಥಿಗಳನ್ನು ಆರತಿ ಬೆಳಗಿ, ಗುಲಾಬಿ ಹೂ ನೀಡಿ , ಬ್ಯಾಂಡ್ ಸೆಟ್, ಗೊಂಬೆಗಳ ಮೂಲಕ ಆಕರ್ಷಕವಾಗಿ ಶಿಕ್ಷಕರು ಬರಮಾಡಿಕೊಂಡರು. ನರ್ಸರಿ, ಎಲ್ ಕೆ ಜಿ, ಯುಕೆಜಿ, 1 ನೇ ತರಗತಿಗೆ ವಿದ್ಯಾರ್ಥಿಗಳು ಅತ್ಯಂತ ಖುಷಿಯಿಂದ ಹೆಜ್ಜೆ ಹಾಕಿದರು.

ಎಕ್ಸೆಲ್ ವಿದ್ಯಾಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿ ಸಂಸ್ಕಾರಯುತ ಗುಣಮಟ್ಟದ ಶಿಕ್ಷಣದೊಂದಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಿ ಮಕ್ಕಳನ್ನು ದೇಶದ ಉತ್ತಮ ಪ್ರಜೆಗಳಾಗಿ ರೂಪಿಸಲಾಗುವುದು ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ.ನವೀನ್ ಕುಮಾರ್ ಮರಿಕೆ,‌ ಅರಮಲೆಬೆಟ್ಟ ಕ್ಯಾಂಪಸ್ ಪ್ರಾಂಶುಪಾಲ ಡಾ. ಪ್ರಜ್ವಲ್, ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್, ಎಒ ಕೀರ್ತಿನಿಧಿ ಜೈನ್ ,ಎಕ್ಸೆಲ್ ವೇಣೂರು ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಸುಜಾತಾ ಬಿ., ಗುರುವಾಯನಕೆರೆ ಉಪಸ್ಥಿತರಿದ್ದರು.

ಎಕ್ಸೆಲ್ ಮುಖ್ಯ ಶಿಕ್ಷಕಿ ಲೀನಾ ಫ್ಲೋರಿನಾ ಪಿಂಟೋ ಕಾರ್ಯಕ್ರಮ ನಿರೂಪಿಸಿದರು.

Related posts

ಎರಡು ವರ್ಷದ ಕತ್ತಲೆಗೆ ಅಂತ್ಯ ಹಾಡಿದ ಶಾಸಕ ಹರೀಶ್ ಪೂಂಜ: ಮಂದಹಾಸ ಮೂಡಿಸಿದ ವಿದ್ಯುತ್ ಸಂಪರ್ಕ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕ ಸಂಭ್ರಮಾಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ‌ ವಿದ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ

Suddi Udaya

ಆರಂಬೋಡಿ ಗ್ರಾಮ‌ ಪಂಚಾಯತ್ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆ

Suddi Udaya

ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಸಾವು

Suddi Udaya

ನಡ : ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya
error: Content is protected !!