38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ನಾವರ ಪ್ರಗತಿಬಂಧು ಒಕ್ಕೂಟದ ತ್ರೈಮಾಸಿಕ ಸಭೆ

ನಾವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಇದರ ವತಿಯಿಂದ ನಡೆಯುವ ನಾವರ ಪ್ರಗತಿಬಂಧು ಒಕ್ಕೂಟದ ತ್ರೈಮಾಸಿಕ ಸಭೆಯು ನಾವರ ದೇವಸ್ಥಾನದ ನೂತನ ಸಭಾಭವನದಲ್ಲಿ ಒಕ್ಕೂಟದ ಅಧ್ಯಕ್ಷ ಚಂದಪ್ಪ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ದಿವ್ಯಶ್ರೀ ಸ್ವಸಹಾಯ ಸಂಘದ ಸದಸ್ಯರು ದೀಪ ಪ್ರಜ್ವಲಿಸುವುದರ ಮೂಲಕ ಒಕ್ಕೂಟ ಸಭೆಗೆ ಚಾಲನೆ ನೀಡಿದರು.
ವೇದಿಕೆಯಲ್ಲಿ ನಾರಾವಿ ವಲಯ ಜನಜಾಗ್ರತಿ ಸಮಿತಿಯ ಅಧ್ಯಕ್ಷ ನಿತ್ಯಾನಂದ ಎನ್. ನಾವರ, ಆಂತರಿಕ ಲೆಕ್ಕಪರಿಶೋಧಕ ಶೇಖರ, ಒಕ್ಕೂಟದ ಕಾರ್ಯದರ್ಶಿ ಎನ್. ವೀರೇಂದ್ರ ಕುಮಾರ್ ಜೈನ್, ಸೇವಾ ಪ್ರತಿನಿಧಿ ಶ್ರೀಮತಿ ಪುಷ್ಪಾವತಿ, ಒಕ್ಕೂಟದ ಜೊತೆ ಕಾರ್ಯದರ್ಶಿ ಶ್ರೀಮತಿ ನಳಿನಾಕ್ಷಿ, ಕೋಶಾಧಿಕಾರಿ ಹರೀಶ್ ಮೂಲ್ಯ, ಜನಜಾಗ್ರತಿ ಗ್ರಾಮ ಸಮಿತಿಯ ಅಧ್ಯಕ್ಷ ಸುರೇಶ್ ಪೂಜಾರಿ ಉಪಸ್ಥಿತರಿದ್ದರು.

ಆಮಂತ್ರಣ ಪರಿವಾರದ ಎನ್ ವಿಜಯ ಕುಮಾರ್ ಜೈನ್ ಮಾತನಾಡಿ ಜೂ.14ರಂದು ಅಳದಂಗಡಿಯಲ್ಲಿ ನಡೆಯುವ ಸರಕಾರಿ ಕೆಲಸದಿಂದ ನಿವೃತ್ತರಾಗಿರುವ ಶಿವಪ್ರಸಾದ್ ಅಜಿಲರ ಪೌರ ಸನ್ಮಾನದ ಬಗ್ಗೆ ಉಚಿತ ಆರೋಗ್ಯ ತಪಾಸಣಾ ಶಿಬಿರದ ಬಗ್ಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

ಸಿದ್ದಪ್ಪ ಮೂಲ್ಯ ಸ್ವಾಗತಿಸಿ, ವಂದಿಸಿದರು.

Related posts

ಉಜಿರೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶಿಶಿಲ: ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕಾರಿನಲ್ಲಿ ಬಂದು ಭಾಸ್ಕರ ನಾಯ್ಕ ಹಾಗೂ ಅವರ ಪತ್ನಿಗೆ ಹಲ್ಲೆ ನಡೆಸಿದ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ರಾಜ್ಯಾದಾದ್ಯಂತ ಬಾಂಬೆ ಮಿಠಾಯಿ ನಿಷೇಧ: ಆರೋಗ್ಯ ಸಚಿವರಿಂದ ಅಧಿಕೃತ ಆದೇಶ – ಇನ್ಮುಂದೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ

Suddi Udaya

ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,

Suddi Udaya

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

Suddi Udaya
error: Content is protected !!