September 7, 2026
ತಾಲೂಕು ಸುದ್ದಿ

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

ಬೆಳ್ತಂಗಡಿ: ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರು ನೀಡಿರುವ ಸೂಚನೆಯಂತೆ ಬೆಳ್ತಂಗಡಿ ತಾ. ಪಂ. ಸಭಾಂಗಣದಲ್ಲಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಮತ್ತು ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ರವರು ಲೋಕೋಪಯೋಗಿ ಇಲಾಖೆ, ಶಿಕ್ಷಣ ಇಲಾಖೆ, ಮೆಸ್ಕಾಂ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ಸಭೆ ನಡೆಸಿ, ಜಿಲ್ಲಾಧಿಕಾರಿಗಳ ಆದೇಶದಂತೆ ಕ್ರಮ ವಹಿಸಲು ಸೂಚಿಸಿದರು.
ಗುಡ್ಡ ಜರಿತ ಉಂಟಾಗಬಹುದಾದ ಸ್ಥಳದಲ್ಲಿ ಅಥವಾ ಹೊಳೆ, ತೊರೆ ಬದಿಯಲ್ಲಿರುವ ಮನೆಗಳವರಿಗೆ ವಿಪರೀತ ಮಳೆಯ ಅವಧಿಯಲ್ಲಿ ಮನೆಯನ್ನು ತೆರವುಗೊಳಿಸಿ ಕಾಳಜಿ ಕೇಂದ್ರ ಅಥವಾ ಸಂಬಂಧಿಕರ ಮನೆಗೆ ತೆರಳುವಂತೆ ನೋಟೀಸನ್ನು ನೀಡುವುದು, ಗುಡ್ಡಜರಿತ ಉಂಟಾಗಬಹುದಾದ ಸ್ಥಳಗಳಲ್ಲಿ, ದಾಟಲು ಅಪಾಯಕಾರಿಯಾಗಿರುವ ಕಾಲುಸಂಕ, ಸೇತುವೆ ಇತ್ಯಾದಿ ಸ್ಥಳಗಳನ್ನು ಗುರುತಿಸಿ ಎಚ್ಚರಿಕೆ ಫಲಕಗಳ ಅಳವಡಿಕೆ, ಗ್ರಾಮ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯನ್ನು ಕರೆದು ಚರ್ಚಿಸುವುದು, ಶಾಲೆ ಮತ್ತು ಅಂಗನವಾಡಿ ಕಟ್ಟಡಗಳು ಶಿಥಿಲವಾಗಿದ್ದಲ್ಲಿ ಕೂಡಲೇ ವರದಿ ನೀಡಿ ತರಗತಿಗಳನ್ನು ನಡೆಸಲು ಬದಲಿ ವ್ಯವಸ್ಥೆ ಮಾಡುವುದು ಇತ್ಯಾದಿಗಳ ಬಗ್ಗೆ ಕೂಡಲೇ ಕ್ರಮ ವಹಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾಮ ಆಡಳಿತ ಅಧಿಕಾರಿಗಳಿಗೆ ಸೂಚಿಸಲಾಯಿತು.

Related posts

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

Suddi Udaya

ನ.15: ಕಸ್ತೂರಿ ರಂಗನ್ ವರದಿ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಬೆಂಬಲ

Suddi Udaya

ಬಂದಾರುವಿನಲ್ಲಿ ಸರಿಯಾಗಿ ಬಸ್ಸು ವ್ಯವಸ್ಥೆಯಿಲ್ಲದೆ ಪ್ರಯಾಣಿಕರ ಪರದಾಟ: ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಸ್ಥಳೀಯರ ಮನವಿ

Suddi Udaya

ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ

Suddi Udaya

ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ನೂತನ ಶಿಲಾಮಯ ಧ್ವಜಸ್ತಂಭದ ಶೋಭಾಯಾತ್ರೆಗೆ ಉಜಿರೆಯಲ್ಲಿ ಗಣ್ಯರಿಂದ ಚಾಲನೆ

Suddi Udaya

ಪುದುವೆಟ್ಟು: ಅಡ್ಯಾದಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya
error: Content is protected !!